ವಸತಿ ಶಾಲೆ ಪ್ರವೇಶಕ್ಕೆ ಅವಕಾಶ

Published on

ಹೊಸಪೇಟೆ : ಈ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಸ್ಲಿಂ ವಸತಿ ಶಾಲೆ, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ.

ಪ್ರವೇಶ ಪತ್ರವನ್ನು ವೆಬ್‌ಸೈಟ್ http://dom.karnataka.gov.in ಗೆ ಭೇಟಿ ನೀಡಿ ಸ್ಯಾಟ್ಸ್ ಸಂಖ್ಯೆಯನ್ನು ನಮೂದಿಸಿ ಡೌನ್‌ಲೊಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಾಗೂ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡುವಂತೆ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net