

ಹೊಸಪೇಟೆ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇಗೌಡರವರು 14ನೇ ಶತಮಾನದಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಅವರ ದೂರ ದೃಷ್ಠಿಯ ಕಲ್ಪನೆಗಳು ಮಹತ್ವವಾಗಿದೆ. ಸುಂದರ ನಗರ ನಿರ್ಮಾಣ, ವ್ಯಾವಹಾರಿಕ ಕೇಂದ್ರಗಳ ನಿರ್ಮಾಣ, ವಿವಿಧ ಕಸುಬುಗಳಿಗೆ ಪೂರಕವಾಗಿ ಮಾರುಕಟ್ಟೆ ನಿರ್ಮಾಣ, ಕೃಷಿಕರಿಗೆ ಆವಶ್ಯಕವಾದ ಸೌಲಭ್ಯಗಳು, ಕೆರೆ ಉದ್ಯಾನವನ, ದೇಗುಲಗಳ ನಿರ್ಮಾಣ ಸುಮದರವಾಗಿ ನಿರ್ಮಿಸಿಕೊಟ್ಟು ಬೆಂಗಳೂರನ್ನು ವಿಶ್ವಕ್ಕೇ ಮಾದರಿ ನಗರವಾಗಿ ನಿರ್ಮಿಸಿಕೊಟ್ಟಿದ್ದರು. ಹಿಂದಿನ ಬೇರುಗಳ ಸಾಧನೆಗಳು ಇತಿಹಾಸಲ್ಲಿ ಅಡಗಿದೆ. ಮಹಾನ್ ವ್ಯಕ್ತಿಗಳ ಜನ್ಮ ದಿನಾಚರಣೆಯ ಮೂಲಕ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸುವ ಮೂಲಕ ಗೌರವ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಎಂಎಸ್.ದಿವಾಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣವರ ಇತರರಿದ್ದರು.