ಮದ್ಯಪಾನ ವ್ಯಸನ ಸ್ಮಶಾನಕ್ಕೆ ಆಹ್ವಾನ

01 MANJU 06
Published on

ಹೊಸಪೇಟೆ: ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿಗಳು ಶ್ರಮಿಸಿದವರು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿಗಳ ಸಭಾಂಗದಲ್ಲಿ ಶುಕ್ರವಾರ ನಡೆದ ವ್ಯಸನ ಮುಕ್ತ ದಿನಾಚರಣೆಯಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ ವ್ಯಸನ ಮುಕ್ತ ಸಮಾಜದ ಕನಸು ಕಂಡಿದ್ದ ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರು 1975 ರಿಂದ ಸಾಮಾಜಿಕ ಕ್ರಾಂತಿಗೆ ಮುನ್ನಡಿ ಬರೆದರು. ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾಗಿತ್ತು. ಮದ್ಯಪಾನ ಸೇರಿ ದುಶ್ಚಟಗಳಿಂದ ವ್ಯಕ್ತಿಯನ್ನು ಸ್ಮಶಾನಕ್ಕೆ ಅಹ್ವಾನಿಸಿದಂತೆ ಎಂಬುದನ್ನು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದರು. ಜಾತಿ, ಮತ, ಪಂಗಡ, ಧರ್ಮ, ಭಾಷೆ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆAಡ್ ಸೇರಿದಂತೆ ವಿವಿಧ ವಿದೇಶದಲ್ಲೂ ಮಹಾಂತ ಶಿವಯೋಗಿಗಳು ಜೋಳಿಗೆ ಹಿಡಿದು ಜನರಲ್ಲಿ ದುಶ್ಚಟಗಳ ಭಿಕ್ಷೆ ಬೇಡಿದ್ದರು. ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆ ಪ್ರೇರಣೆಯಾಗಬೇಕಿದೆ ಎಂದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಶಿರೇಸ್ತದಾರರಾದ ಮನೋಜ್, ಪ್ರಿಯದರ್ಶಿನಿ, ವಾರ್ತಾ ಇಲಾಖೆ ಸ್ಥಾನಿಕಾಧಿಕಾಧಿಕಾರಿಗಳಾದ ರಾಮಾಂಜನೇಯ, ಅಶೋಕ್ ಉಪ್ಪಾರ, ಪಿ.ಕೃಷ್ಣಸ್ವಾಮಿ, ತಾಯೇಶ್, ಕಿಶೋರ್, ತಿಪ್ಪೇಶ್, ದೇವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net