ಹೊಸಪೇಟೆ: ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿ ಮಾಡಲು ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 2 ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.
ಚಿತ್ರದುರ್ಗದ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ (ಕೆ.ಒ.ಎಫ್.), ವಿಭಾಗೀಯ ಕಚೇರಿ ವಿಜಯನಗರದಿಂದ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಸರ್ಕಾರದ ನಿಗದಿ ಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ ರೂ. 7,280 ರಂತೆ ರೈತರಿಂದ ಖರೀದಿಗಾಗಿ 4 ಖರೀದಿ ಕೇಂದ್ರಗಳನ್ನು ಜಿಲ್ಲೆಯಲ್ಲಿ ಈಗಾಗಲೇ ಸ್ಥಾಪನೆಮಾಡಲಾಗಿದೆ. ಹೆಚ್ಚುವರಿಯಾಗಿ ಎರಡು ಖರೀದಿ ಕೇಂದ್ರಗಳನ್ನು ನಗರದಲ್ಲಿ ಮತ್ತು ಕೋಗಳಿ ಗ್ರಾಮದಲ್ಲಿ ಪ್ರಾರಂಭಿಸಲಾಗುತ್ತಿದೆ.