ವಕೀಲ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

07 MANJU 07
Published on

ಹೊಸಪೇಟೆ: ತುಮಕೂರು ವಕೀಲ ರವಿಕುಮಾರ್ ಮೇಲೆ ನಡೆದ ಹಲ್ಲೆ ಖಂಡಿಸಿ ನಗರದಲ್ಲಿ ವಕೀಲರ ಸಂಘದಿAದ ಗುರುವಾರ ಪ್ರತಿಭಟನೆ ನಡೆಸಿ, ತಹಸೀಲ್ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

ತುಮಕೂರು ನಗರ ಸಿಪಿಐ ದುರ್ವತನೆಯಿಂದ ವಕೀಲ ರವಿಕುಮಾರ್‌ಗೆ ವಿನಾಕಾರಣ ನಿಂದಿಸಿ ಹಲ್ಲೆ ಮಾಡಿದ್ದಾರೆ. ವಕೀಲರ ಮೇಲೆ ಹಲ್ಲೆ ಮಾಡಿದ ಪೋಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ರಾಜ್ಯದ ನಾನಾ ಕಡೆಗಳಲ್ಲಿ ವಕೀಲರ ಮೇಲೆ ಪೋಲೀಸರಿಂದ ಹಲ್ಲೆ ಹಡೆಯುಲ್ಲೇ ಇವೆ. ಅಂತಹ ಪ್ರಕರಣಗಳು ಪುನರಾವರ್ತನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಪ್ರಲ್ಹಾದ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ, ಪ್ರಮುಖರಾದ ಕರುಣಾನಿಧಿ, ತಾರಿಹಳ್ಳಿ ಹನುಮಂತಪ್ಪ, ಮಹಾಂತೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net