ಹೊಸಪೇಟೆ: ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ನಿಮಿತ್ತ ಕೃಷಿ ಇಲಾಖೆಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಡಿ.13 ರಂದು ಬೆಳಿಗ್ಗೆ 10 ಗಂಟೆಗೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಸಿರಿಧಾನ್ಯಗಳಾದ ಜೋಳ, ರಾಗಿ, ನವಣೆ, ಸಜ್ಜೆ, ಹಾರಕ, ಬರಗು ಮತ್ತು ಸಾಮೆ ಬೆಳೆಗಳಿಂದ ಸಿಹಿ ಮತ್ತು ಖಾರ ಖಾದ್ಯಗಳನ್ನು ತಯಾರಿಸಬಹುದು. ಬಳಕೆಯಾಗದ ಬೆಳೆಗಳು, ಮರೆತು ಹೋದ ಆಹಾರಗಳು, ಸಿರಿಧಾನ್ಯ ಹೊರತುಪಡಿಸಿ ಇತರೆ ದೇಸಿ ತಳಿಗಳಡಿ ಬರುವ ಆಹಾರ ಮತ್ತು ಎಣ್ಣೆಕಾಳು ಬೆಳೆಗಳು, ತರಕಾರಿ ಮತ್ತು ಹಣ್ಣುಗಳ ಇತ್ಯಾದಿ ಖಾದ್ಯಗಳನ್ನು ತಯಾರಿಸಬಹುದು.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.