ಅಹಲ್ಯಾಬಾಯಿ ಹೋಳ್ಕರ್ ಹಿಂದು ಧರ್ಮದ ರಕ್ಷಕಿ

28 MANJU 05
Published on

ಹೊಸಪೇಟೆ: ಅಹಲ್ಯಾಬಾಯಿ ಹೋಳ್ಕರ್ ಅವರು ಸಾವಿರಾರು ಹಿಂದೂ ದೇಗುಲ ಹಾಗೂ ಪುಣ್ಯ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಹಿಂದು ಧರ್ಮದ ರಕ್ಷಣೆಗೆ ನಿಂತಿದ್ದರು ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಅವರು ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಅಹಲ್ಯಾಬಾಯಿ ಹೋಳ್ಕರ್ ಅವರ ಜನ್ಮದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಹಲ್ಯಾಬಾಯಿ ಹೋಳ್ಕರ್ ಅವರು ಭಾರತದಲ್ಲಿ ಅನೇಕ ದೇವಾಲಯಗಳನ್ನು ಸ್ಥಾಪನೆ ಮಾಡಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅನ್ಯ ಧರ್ಮಿಯರಿಂದ ದಾಳಿಗೆ ಒಳಗಾಗಿದ್ದ 12 ಜ್ಯೋತಿರ್ಲಿಂಗಗಳ ಜೀರ್ಣೋದ್ಧಾರ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.

ರಾಜಮಾತೆದೇವಿ ಅಹಿಲ್ಯಾಬಾಯಿ ಹೋಳ್ಕರ್ ಅವರ 200ನೇ ಜನ್ಮದಿನ ಅಂಗವಾಗಿ ಮೇ 31ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಹಿಲ್ಯಾಬಾಯಿ ಹೋಳ್ಕರ್ ಅವರ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಜ್ಯೋತಿ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮಕ್ಕೆ ಭಾಗವಹಿಸಿದ ಮಹಿಳೆಯರಿಗೆ ಅರಿಸಿನ,ಪ ಕುಂಕುಮ, ಬಳೆ ಮತ್ತು ಕುಬಸದಕಣ ನೀಡಿ ಗೌರವಿಸಲಾಯಿತು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅರುಂಡಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ, ಪ್ರಮುಖರಾದ ಸುಗುಣ, ಶಂಕರ್ ಮೇಟಿ, ವಿದ್ವಾನ್, ರಾಘವೇಂದ್ರ, ರೇವಣ್ಣ, ಸಿದ್ಧಪ್ಪ, ಮೀರಾಬಾಯಿ, ಕುಸುಮ ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net