ವಿಜಯನಗರ ಜಿಲ್ಲೆ ಜ.09ಕ್ಕೆ ಬಂದ್

30 MANJU 05
Published on

ಹೊಸಪೇಟೆ: ಇತ್ತೀಚೆಗಷ್ಟೇ ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಯನ್ನು ವಿರೋಧಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು 2025ರ 09ರಂದು ವಿಜಯನಗರ ಬಂದ್ ಆಚರಿಸಲು ನಿರ್ಧರಿಸಲಾಗಿದೆ ಎಂದು ಹುಡಾ ಅದ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಸತ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿAದ ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಬೆಂಬಲ ನೀಡುವಂತೆ ವರ್ತಕರು, ಚಲನಚಿತ್ರ ಮಾಲೀಕರು, ಬಸ್ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಪಟ್ಟಣದ ಎಲ್ಲಾ ಕೋಮಿನ ಸಮುದಾಯದವರು ಹಾಗೂ ಸಂಘ-ಸAಸ್ಥೆಗಳಲ್ಲಿ ಮನವಿ ಮಾಡಲಾಗಿದ್ದು, ಅವರು ಬೆಂಬಲ ಕೊಡುವುದಾಗಿ ತಿಳಿಸಿದ್ದಾರೆ ಎಂದರು.

ಪ್ರಮುಖರಾದ ನಿಂಬಗಲ್ ರಾಮಕೃಷ್ಣ, ಬಣ್ಣದ ಮನೆ ಸೋಮಶೇಖರ್, ತಾಯಪ್ಪ ನಾಯಕ, ಡಿ.ವೆಂಕಟರಮಣ, ದೂಡ್ಡ ಬಸಪ್ಪ, ರಾಮಚಂದ್ರ ಬಾಬು, ಕೆ.ರವಿಕುಮಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net