ಸಮನ್ವಯತೆಯಿಂದ ತಿಂಗಳೊಳಗೆ ಕುಡಿವ ನೀರು ಪೂರೈಸಿ

09 MANJU 07
Published on

ಹೊಸಪೇಟೆ: ಅಮೃತ್ 2.0 ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಕುಡಿವ ನೀರು ಪೂರೈಕೆಗೆ ಬಾಕಿ ಇರುವಕಾಮಗಾರಿ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಮೃತ್ 2.0 ಯೋಜನೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಮೇಲ್ವಿಚಾರಣೆ ಸಭೆಯಲ್ಲಿ ಮಾತನಾಡಿದರು.

ಅಮೃತ್‌ಯೋಜನೆಗೆ ಸಂಬAಧಿಸಿದAತೆ ತಾಂತ್ರಿಕ ಸಮಸ್ಯೆಗಳು, ರಸ್ತೆ ಬದಿ ಪೈಪ್‌ಲೈನ್ ವ್ಯವಸ್ಥೆ, ಜಾಗದ ಕೊರತೆಗಳಿದ್ದರೇ ಶೀಘ್ರವೇ ಇತ್ಯರ್ಥಗೊಳಿಸಿ ಜನರಿಗೆಕುಡಿಯುವ ನೀರು ಪೂರೈಕೆಗೆಕ್ರಮ ವಹಿಸಬೇಕು. ನೈರ್ಮಲ್ಯ, ಕುಡಿವ ನೀರು ಸೇರಿದಂತೆ ಚರಂಡಿ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಬೇಕು. ಮರಿಯಮ್ಮನಹಳ್ಳಿಯಲ್ಲಿ ಮುಂಬರುವ ರಥೋತ್ಸವಕ್ಕೆ ಹೆಚ್ಚಿನ ಜನಸಂಖ್ಯೆ ಸೇರಲಿದ್ದಾರೆ. ಅಷ್ಟರೊಳಗೆ ಕುಡಿವ ನೀರಿನ ಯೋಜನೆ ಪೂರ್ಣಗೊಳಿಸಲು ಅಧಿಕಾರಿಗಳು ಕಾರ್ಯನ್ಮೋಖರಾಗಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಕೆಲಸದಲ್ಲಿ ನಿರಾಸಕ್ತಿ ವಹಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ನಿಗಧಿತ ಸ್ಥಳದಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ನೀಡಿದ್ದರೂ, ನಿರ್ಮಾಣ ಕಾಮಗಾರಿಗಳಿಗೆ ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಇನ್ನು ಹದಿನೈದು ದಿನದೊಳಗೆ ಶೌಚಾಲಯಗಳ ಕಾಮಗಾರಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳು ನಿರಾಸಕ್ತಿ ವಹಿಸಿದರೆ ಶೋಕಾಸ್ ನೊಟೀಸ್ ನೀಡಿ ಕ್ರಮ ಜರುಗಿಸಲಾಗುವುದು ಎಂದರು.

ಉಪವಿಭಾಗಿಯಾಧಿಕಾರಿಗಳಾದ ಪಿ.ವಿವೇಕಾನಂದ, ಚಿದಾನಂದ ಗುರುಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ನಗರ ನೀರು ಸರಬರಾಜು ಇಲಾಖೆ ಎಇಇ ಮಲ್ಲಿಕಾರ್ಜುನ ಪಾಟೀಲ್, ಪೌರಾಯುಕ್ತ ಸಿ.ಚಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net