ಮದ್ಯವರ್ತಿಗಳ ಆಮಿಷಕ್ಕೆ ಒಳಗಾಗದಿರಿ

Published on

ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿ ವಿಚಾರದಲ್ಲಿ ಮದ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋಗಬಾರದು ಎಂದು ಹಗರಿಬೊಮ್ಮನಹಳ್ಳಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾದಿಕಾರಿ ತಿಳಿಸಿದ್ದಾರೆ.

ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಖಾಲಿ ಇದ್ದ, 6 ಅಂಗನವಾಡಿ ಕಾರ್ಯಕರ್ತೆ ಮತ್ತು 30 ಸಹಾಯಕಿಯರ ಹುದ್ದೆಗೆ ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು, ನೇಮಕಾತಿಯ ವಿಚಾರದಲ್ಲಿ ಮಧ್ಯವರ್ತಿಗಳು ಹಾಗೂ ಕೆಲವು ಸಂಘಟನೆಯ ಹೆಸರುಗಳನ್ನು ಬಳಸಿಕೊಂಡು ಸಾರ್ವಜನಿಕರಲ್ಲಿ ನೇಮಕಾತಿ ಮಾಡಿಕೊಡುತ್ತೇವೆ ಎಂದು ಹಣ ವಸೂಲಿ ಮಾಡುತ್ತಿರುವುದು ಮತ್ತು ಮಧ್ಯವರ್ತಿಗಳು ನೇಮಕಾತಿಯ ಪ್ರಕ್ರಿಯೇಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಕೇಳಿ ಬರುತ್ತಿದೆ. ನೇಮಕಾತಿ ಪ್ರಕ್ರಿಯೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಪರಿಶೀಲಿಸಿ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೇಮಕಾತಿ ಮಾಡಲಾಗುವುದು. ನೇಮಕಾತಿಯು ಸಂಪೂರ್ಣವಾದ ಪಾರದರ್ಶಕತೆಯಿಂದ ಕೂಡಿರುತ್ತದೆ. ಹಾಗಾಗಿ ಸಾರ್ವಜನಿಕರು ಯಾವುದೇ ಮೋಸದ ಜಾಲಕ್ಕೆ ಒಳಗಾಗ ಬಾರದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net