ಹೊಸಪೇಟೆಯಲ್ಲಿ ವ್ಯಕ್ತಿಯ ಕೊಲೆ

IMG-20250130-WA0012
Published on

ಹೊಸಪೇಟೆ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಭೀಕರ ಕೊಲೆಯಾಗಿರುವ ಘಟನೆ ನಗರದ ಹೊರವಲಯದ ಭಟ್ರಳ್ಳಿ ಆಂಜನೇಯ ದೇಗುಲದ ದ್ವಾರ ಬಾಗಿಲಿನ ಬಳಿ ಬೆಳ್ಳಂ ಬೆಳಗ್ಗೆ ನಡೆದಿದೆ.

ನಗರದ ನಿವಾಸಿ ರಾಮಲಿ( 40) ಕೊಲೆಯಾದ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಗೆ ಕಾರಣವಾಗಿದೆ. ಎದೆಗೆ ಚಾಕು ಹಾಕಿ, ಕುತ್ತಿಗೆ ಹೊಟ್ಟೆ ಭಾಗಕ್ಕೆ ದುಷ್ಕರ್ಮಿಗಳು ಮನಸೋ ಇಚ್ಚೇ ಚುಚ್ಚಿ ಕೊಲೆ ಮಾಡಿದ್ದಾರೆ. ಇಲ್ಲಿನ ಗ್ರಾಮೀಣ ಪೊಲೀಸರು, ಬೆರಳಚ್ಚು ತಜ್ಞರು, ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಗಳ ಪತ್ತೆಗೆ ಬಲೆ ಬಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net