ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲಿ

18 MANJU 04
Published on

ಹೊಸಪೇಟೆ: ಎಐಯುಟಿಯುಸಿಗೆ ಸಂಯೋಜನೆಗೊAಡಿರುವ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿAದ ವಿವಿಧ ಬೇಡಿಕೆಗೆ ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೇರವಣಿಗೆ ನಡೆಯಿತು.

ನಗರದ ಕೇಂದ್ರ ಬಸ್‌ನಿಲ್ದಾಣದಿಂದ ಆರಂಭವಾದ ಪ್ರತಿಭಟನಾ ಮೇರವಣಿಗೆ ಪಟ್ಟಣ ಪೊಲೀಸ್ ಠಾಣೆ, ಪುಣ್ಯಮೂರ್ತಿ ವೃತ್ತ, ಮಾರ್ಡ್ನ್ ವೃತ್ತ, ಡಾ.ಪುನೀತ್ ರಾಜಕುಮಾರ್ ವೃತ್ತ ಮಾರ್ಗವಾಗಿ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಮಾತನಾಡಿ, ಕಳೆದ ಜ.07 ರಿಂದ 10ರವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸಲಾಗಿತ್ತು. ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಸಭೆ ಮಾಡಿದ್ದರು. ಈ ಸಭೆಯಲ್ಲಿ ಎಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ 10 ಸಾವಿರ ರೂ. ಗೌರವಧನವನ್ನು ನೀಡಲಾಗುವುದು.

ಕಾಂಪೋನೆAಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆAಟ್ಸ್ಗಳಿAದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, 10 ಸಾವಿರ ರೂ. ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು. ಬಜೆಟ್ ಪೂರ್ವಭಾವಿ ಸಭೆ ನಡೆಸಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಂತೆ ಪ್ರೋತ್ಸಾಹಧನವನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ ಇಲ್ಲಿಯವರೆಗೂ ಇವುಗಳು ಈಡೇರಿರುವುದಿಲ್ಲ. ಇದಕ್ಕೆ ಸಂಬAಧಿಸಿದAತೆ ಸ್ಪಷ್ಟವಾದ ಆದೇಶ ಇನ್ನೂ ಹೊರಡಿಸಿರುವುದಿಲ್ಲ. ಈ ಕೂಡಲೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ನೀಡುವ ಆದೇಶವನ್ನು ಕೂಡಲೇ ಹೊರಡಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net