ಅಧಿಕಾರಿಗಳ ಮೇಲೆ ಹಲ್ಲೆ ತಡೆಗೆ ಕಠಿಣ ಕಾನೂನು ರೂಪಿಸಲು ಸರ್ಕಾರಿ ನೌಕರರ ಸಂಘ ಒತ್ತಾಯ

29012022 Hospet government employes protest
Published on

ಹೊಸಪೇಟೆ: ಕಂದಾಯ ಇಲಾಖೆಯ ಅಧಿಕಾರಿಗಳು, ನೌಕರರು, ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ನಡೆಯುತ್ತಿರುವ ಹಲ್ಲೆ ತಡೆಗೆ ಕಠಿಣ ಕಾನೂನು ರೂಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಎಸಿ ಸಿದ್ದರಾಮೇಶ್ವರಗೆ ಶನಿವಾರ ಮನವಿ ಸಲ್ಲಿಸಿದರು.

ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕು ದಂಡಾಧಿಕಾರಿ ಮೇಲೆ ಹಲ್ಲೆ ನಡೆಸಲಾಗಿದೆ. ತಹಸಿಲ್ ಕಚೇರಿಗೆ ನುಗ್ಗಿ ಹಲ್ಲೆ ನಡೆಸಿರುವುದು ಸಿಬ್ಬಂದಿಯಲ್ಲಿ ಭಯ ಮೂಡಿಸಿದೆ. ಈರೀತಿಯ ಕೃತ್ಯ ನಡೆದರೆ ಕೆಲಸ ಮಾಡುವುದಾದರೂ ಹೇಗೆ? ಹಲ್ಲೆ ನಡೆಸುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಎಲ್ಲ ಉಪವಿಭಾಗಾಧಿಕಾರಿ, ತಹಸೀಲ್ದಾರ್‌ರ ಸೂಕ್ತ ಭದ್ರತೆಗಾಗಿ ಒಬ್ಬ ಅಂಗರಕ್ಷಕನನ್ನು ನೇಮಿಸಬೇಕು. ಎಸಿ ಕಚೇರಿ, ತಹಸಿಲ್ ಕಚೇರಿಗೆ ಪೊಲೀಸ್ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net