ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಅಹ್ವಾನ

Published on

ಹೊಸಪೇಟೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಮಂತ್ರಾಲಯದಿAದ ಈ ವರ್ಷದ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.

ವಿಜಯನಗರ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜಸೇವೆ, ತಂತ್ರಜ್ಞಾನ, ಕಲೆ, ಸಂಸ್ಕೃತಿ, ಪರಿಸರ ಸಂರಕ್ಷಣೆ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಹಸ ಮಾಡಿದಂತಹ 5 ವರ್ಷ ಮೇಲ್ಪಟ್ಟ 18 ವರ್ಷದೊಳಗಿನ ಮಕ್ಕಳು ಜು.31 ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನ್ಯಾಷನಲ್ ಅವಾರ್ಡ್ ಪೋರ್ಟಲ್ ಅನ್ನು ಭೇಟಿ ನೀಡಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರು, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net