ಬಯಲಾಟ ವಿಚಾರ ಸಂಕರಣ ಜೂ.30ರಿಂದ

Oplus_131072
Oplus_131072
Published on

ಹೊಸಪೇಟೆ: ಬಯಲಾಟವನ್ನು ಸಂರಕ್ಷಿಸುವ ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜೂ.30 ಹಾಗೂ ಜು.01 ರಂದು ಕನ್ನಡವಿವಿಯಲ್ಲಿ ಬಯಲಾಟಗಳ ಸಂಶೋಧನೆ : ಹೊಸ ಸಾಧ್ಯತೆಗಳು ಎರಡು ದಿನಗಳ ವಿಚಾರ ಸಂಕಿರಣ ಮತ್ತು ಬಯಲಾಟ ಪ್ರದರ್ಶನ ಕಾರ್ಯಕ್ರಮವನ್ನು ಅಕಾಡೆಮಿ ಹಮ್ಮಿಕೊಂಡಿದೆ ಎಂದು ಬಯಲಾಟ ಅಕಾಡೆಮಿ ಅಕಾಡೆಮಿ ಅಧ್ಯಕ್ಷ ಡಾ.ಕೆ.ಆರ್.ದುರ್ಗಾದಾಸ್ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಬಯಲಾಟ ಕರ್ನಾಟಕದಲ್ಲಿ ಪ್ರಮುಖ ಜನಪದ ರಂಗಕಲೆಯಾಗಿದೆ. ಪ್ರಾದೇಶಿಕವಾಗಿ ಭಿನ್ನವೆಂಬAತೆ ತೋರಿದರೂ ಜಾತ್ರೆ, ಹಬ್ಬಗಳಲ್ಲಿ ಸಾವಿರಾರು ಸಂಖ್ಯೆಯ ಪ್ರೇಕ್ಷಕರಿಗೆ ಮನೋರಂಜನೆ ಜತೆಗೆ ಆಯಾ ಪ್ರದೇಶದ ಸಾಂಸ್ಕೃತಿಕ ಮೌಲ್ಯಗಳನ್ನು ಪ್ರಸಾರ ಮಾಡುತ್ತದೆ. ಆದರೆ, ಇದರ ಬಗ್ಗೆ ನಿರೀಕ್ಷಿತ ಪ್ರಮಾಣದಲ್ಲಿ ಸಂಶೋಧನೆ ನಡೆಯುತ್ತೀಲ್ಲ. ಈ ಹಿನ್ನೆಲೆಯಲ್ಲಿ ಕಲಾವಿದರನ್ನು ಗುರುತಿಸು ಹಾಗೂ ಮಾಹಿತಿ ಸಂಗ್ರಹಿಸುವ ಕಾರ್ಯ ಅಕಾಡೆಮಿ ಮಾಡುತ್ತಿದೆ ಎಂದರು.

ಕಾರ್ಯಕ್ರಮಕ್ಕೆ ಕನ್ನಡ ವಿವಿಯ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಚಾಲನೆ ನೀಡಲಿದ್ದಾರೆ. ನಾಡಿನ ಚಿಂತಕರು, ಸಾಹಿತಿಗಳು ಭಾಗವಹಿಸಿ ಉಪನ್ಯಾಸ ನೀಡಲಿದ್ದಾರೆ. ಈ ಎರಡು ದಿನಗಳಲ್ಲಿ ಬಯಲಾಟ, ಶ್ರೀ ಕೃಷ್ಣ ಪಾರಿಜಾತ, ರಾಧಾನಾಟ ಮತ್ತು ತೊಗಲುಗೊಂಬೆ ಆಟಗಳ ಪ್ರದರ್ಶನ ನಡೆಯಲಿವೆ. ಅಂದಾಜು 50ಕ್ಕೂ ಹೆಚ್ಚಿನ ಕಲಾವಿದರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಮುಖರಾದ ಮಂಜುನಾಥ ತಳಕಲ್ಲ, ಕಾವೇರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net