ಹಂಪಿ ಶುಗರ್ಸ್‌ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಶೀಘ್ರ ಕ್ರಮ

16 HPT 3A
Published on

ಹೊಸಪೇಟೆ: ಬಿಜೆಪಿ ಡಬಲ್ ಇಂಜಿನ್ ಸರ್ಕಾರದಿಂದ ದೇಶದ ಚಿತ್ರಣ ಬದಲಾಗುತ್ತಿದ್ದು, ಪಶ್ಚಿಮ ತಾಲೂಕುಗಳ ಅಭವೃದ್ಧಿಗಾಗಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಿದ್ದರಿಂದ ಈ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಮನವಿ ಮಾಡಿದರು.

ವಿಜಯ ಸಂಕಲ್ಪ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು. ಈ ಭಾಗದ ಕಬ್ಬು ಬೆಳೆಗಾರರ ಅನುಕೂಲಕ್ಕಾ ಗಿ ಹಂಪಿ ಶುಗರ್ಸ್‌ ಸಕ್ಕರೆ ಕಾರ್ಖಾನೆ ಸ್ಥಾಪಿಸಲಾಗುತ್ತಿದ್ದು, ಅದಕ್ಕೆ ರಾಜ್ಯ ಸರ್ಕಾರದಿಂದಲೂ ಅನುಮೋದನೆ ಸಿಕ್ಕಿದೆ. ಕೆಲವೇ ದಿನಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ವಿಜಯನಗರ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನಿಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಮತ್ತು ವಿಜಯನಗರ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ, ಜಿಲ್ಲೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದರು.

ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್ ಚವ್ಹಾಣ್ ಮಾತನಾಡಿ, ಮೋದಿ ಉಚಿತ ರೆಷನ್ ಕೊಡ್ತಾರೆ. ಕಾಂಗ್ರೆಸ್ ಒಮ್ಮೆಯಾದ್ರೂ ಬಡವರ ಬಗ್ಗೆ ಗಮನ ಹರಿಸಿದೆಯೇ? ಮೋದಿ ಜತೆಗೆ ಬೊಮ್ಮಾಯಿ ಕೈಜೋಡಿಸಿ, ಬಡವರಿಗೆ ಉಚಿತ ಅಕ್ಕಿ ನೀಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದೆ. ಬಿಜೆಪಿ ಅಂದ್ರೆ ವಿಕಾಸ ಎಂದರ್ಥ. ಕಾಂಗ್ರೆಸ್ ಅಂಗ್ರೆ ವಿನಾಶ ಎಂದರ್ಥ ಎಂದು ಕುಟುಕಿದರು.

ಇತ್ತೀಚೆಗೆ ರಾಯ್‌ಪುರ್‌ದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಬಿರು ಬಿಸಿಲಿದ್ದರಿಂದ ಸೋನಿಯಾ ಗಾಂಧಿ ಅವರಿಗೆ ಛತ್ರಿ ಹಿಡಿಯುತ್ತಾರೆ. ಆದರೆ, ಪಕ್ಕದಲ್ಲಿ ಇದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಛತ್ರಿ ಹಿಡಿಯುವುದಿಲ್ಲ. ಈ ಮೂಲಕ ಇಡೀ ದಲಿತ ಸಮುದಾಯವನ್ನು ಅವಮಾನಿಸಿದಂತಾಗಿದೆ. ಇದು ಕಾಂಗ್ರೆಸ್ ಸಂಸ್ಕೃತಿ. ವಿಜಯನಗರ ಕ್ಷೇತ್ರವನ್ನು ಜಿಲ್ಲಾಯನ್ನಾಗಿಸಿರುವ ಆನಂದ ಸಿಂಗ್ ಒಳ್ಳೆಯ ನೇತಾರ. ಕ್ಷೇತ್ರದಲ್ಲಿ ಅವರನ್ನು ಮರು ಆಯ್ಕೆ ಮಾಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಸತೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ನಾಯಕಿ ರಾಣಿ ಸಂಯುಕ್ತಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಯ್ಯಳಿ ತಿಮ್ಮಪ್ಪ, ಪ್ರಮುಖರಾದ ಕವಿ ತಾ ಈಶ್ವರ ಸಿಂಗ್, ಸಿದ್ದೇಶ ಯಾದವ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net