ಓಲೈಕೆ ರಾಜಕಾರಣಕ್ಕೆ ದೇಶ ಬಲಿ

26 MANJU 03
Published on

ಹೊಸಪೇಟೆ: ಸಂವಿಧಾನ ಬದಲಾವಣೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ಬಿಜೆಪಿ ಪಕ್ಷದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಾಜಿ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಸಂವಿಧಾನ ಬದಲು ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆಯು ಕಾಂಗ್ರೆಸ್, ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದೆ. ಮುಸಲ್ಮಾನರ ಹಿತಕ್ಕಾಗಿ ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ನೀಡಿದ್ದಾಯ್ತು. ಈಗ ಮುಸಲ್ಮಾನರ ಏಳಿಗೆಗಾಗಿ ಸಂವಿಧಾನವನ್ನೆ ಬದಲಾಯಿಸುತ್ತೇವೆ ಡಿಸಿಎಂ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಓಲೈಕೆ ಹಾಗೂ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾಳೆ ಭಾರತವನ್ನೇ ತುಂಡರಿಸುತ್ತದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆಯೇ ಸಾಕ್ಷಿ ಎಂದು ಹೇಳಿದ್ದಾರೆ.

ದುರ್ಬಲ ಸಮುದಾಯಕ್ಕೆ ನೀಡಲಾಗಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಅನ್ಯಾಯ ಮಾಡಲಾಗುತ್ತಿದೆ. ಜನರ ಹಿತವನ್ನು ಕಾಂಗ್ರೆಸ್ ಸರ್ಕಾರ ಮರೆತಿದೆ. ಸಂವಿಧಾನದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ವಿಧಾನಸಭೆಯಲ್ಲಿ ಚರ್ಚೆಯೇ ನಡೆಸದೆ ಕಾನೂನು ಜಾರಿ ಮಾಡಲಾಗುತ್ತಿದೆ. ಸರ್ಕಾರದ ವೈಫಲ್ಯ ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆ. ಕಾಂಗ್ರೆಸ್ ಸಂವಿಧಾನ ಪರ ಎಂದು ಭಾಷಣಗಳಲ್ಲಿ ಮಾತ್ರ ಹೇಳುತ್ತದೆ. ಸಂವಿಧಾನ ಬದಲಾಯಿಸುವ ಮಾತುಗಳು ಕಾಂಗ್ರೆಸ್ಸಿಗರೇ ಹಾಡುತ್ತಿದ್ದಾರೆ. ಅವರ ಮನಸ್ಥಿತಿಯನ್ನು ಇಡೀ ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದರು.

ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ, ರಾಜ್ಯ ಮಹಿಳಾ ಮೋರ್ಚ ಸದಸ್ಯೆ ವಿಜಯಲಕ್ಷ್ಮಿ, ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಪ್ರಮುಖರಾದ ಅಶೋಕ್ ಜೀರೆ, ಉಮಾಪತಿ, ಕಿಚಡಿ ಕೊಟ್ರೇಶ್, ರೇವಣಸಿದ್ದಪ್ಪ, ಚಂದ್ರು ದೇವಲಾಪುರ, ಉಮಾದೇವಿ, ಜಯಶ್ರೀ, ರೇಣುಕಾ, ಶ್ರೀಲತಾ, ಸುನೀತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net