ಬಸ್ ನಿಲ್ದಾಣಕ್ಕೆ ವೀಲ್ ಚೇರ್ ದೇಣಿಗೆ

11 MANJU 01
Published on

ಹೊಸಪೇಟೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದಿಂದ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವೀಲ್ ಚೇರ್, ಪ್ರಥಮ ಚಿಕಿತ್ಸಾ ಕಿಟ್ ಹಾಗೂ ಮಾಸ್ಕ್ಗಳನ್ನು ದೇಣಿಗೆ ಬುಧವಾರ ನೀಡಲಾಯಿತು.

ರೆಡ್ ಕ್ರಾಸ್‌ನ ಚೇರ್ಮನ್ ರವಿಶಂಕರ್ ಮಾತನಾಡಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಹಲವಾರು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಕ್ಯಾನ್ಸರ್ ತಪಾಸಣಾ, ಆರೋಗ್ಯ ತಪಾಸಣಾ, ರಕ್ತದಾನ ಶಿಬಿರಗಳನ್ನು ನಡೆಸಿಕೊಂಡು ಬರಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಅತ್ಯುತ್ತಮ ಕೊಡುಗೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ ಮಾತನಾಡಿ, ಬಸ್ ನಿಲ್ದಾಣಕ್ಕೆ ಬರುವ ವಯೋವೃದ್ದರಿಗೆ, ಅಂಗವಿಕಲರಿಗೆ ಹಾಗೂ ತುಂಬು ಗರ್ಭಿಣಿಯರಿಗೆ ವೀಲ್ ಚೇರ್ ನ ಅಗತ್ಯವಿತ್ತು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಖಾ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಘಟಕದ ಸದಸ್ಯೆ ಅನ್ನಪೂರ್ಣ ಸದಾಶಿವ, ಅಬ್ದುಲ್ ರೆಹಮಾನ್, ಯಮುನಾ, ಅಶ್ವಿನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net