ಸಂಪುಟ ಸಭೆಗೆ ಸಚಿವ ಜಮೀರ್ ಮನವಿ

New Zameer Ahmed New
Published on

ಹೊಸಪೇಟೆ: ಕಲ್ಯಾಣ ಕರ್ನಾಟಕ ಭಾಗದ ವಿಜಯನಗರದಲ್ಲೂ ವಿಶೇಷ ಸಂಪುಟ ಸಭೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಮುಂದಿನ ದಿನಗಳಲ್ಲಿ ವಿಜಯಪುರ, ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಪ್ರಸ್ತಾಪ ಆದಾಗ ಸಚಿವ ಜಮೀರ್ ಅವರು, ನೂತನ ಜಿಲ್ಲೆ ವಿಜಯನಗರದಲ್ಲೂ ವಿಶೇಷ ಸಂಪುಟ ಸಭೆ ನಡೆಸುವಂತೆ ಹಾಗೂ ವಿಜಯನಗರ ಹಾಗೂ ಬಳ್ಳಾರಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮನವಿ ಮಾಡಿದರು. ಸಚಿವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net