

ಹೊಸಪೇಟೆ: ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬುಧವಾರದಿಂದ ಆರಂಭಗೊಂಡವು.
ವೃತ್ತಿಪರ ಕೋರ್ಸ್ಗಳಿಗೆ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆಯಲು ಜಿಲ್ಲೆಯ ನಗರದ ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಚಿತ್ತವಾಡ್ಗಿ ಸರ್ಕಾರಿ ಪಿಯು ಕಾಲೇಜು, ವಿಜಯನಗರ ಕಾಲೇಜು, ವಿಜ್ಞಾನ ಕಾಲೇಜು ಸೇರಿದಂತೆ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ ಬೆಳಗ್ಗೆ ಭೌತಶಾಸ್ತç ಮತ್ತು ಮಧ್ಯಾಹ್ನ ರಸಾಯನಶಾಸ್ತç ಪರೀಕ್ಷೆಗಳು ನಡೆದವು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ ಒಟ್ಟು 4045 ವಿದ್ಯಾರ್ಥಿಗಳ ಪೈಕಿ 144 ಗೈರಾಗಿದ್ದು, 3901 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ತಪಸಾಣೆ ನಡೆಸಿ ಒಳಬಿಡಲಾಯಿತು. ಪೊಲೀಸರು ಕೇಂದ್ರಗಳ ಬಳಿ ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು. ಯಾವುದೇ ಸಮಸ್ಯೆ ಇಲ್ಲದೆ ಸುಸೂತ್ರವಾಗಿ ಪರೀಕ್ಷೆ ನಡೆದಿವೆ.