ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವಿವಿದೇಡೆ ಭೇಟಿ

17 MANJU 03
Published on

ಹೊಸಪೇಟೆ: ನಗರದ ಉಪ ವಿಭಾಗ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳು ಆಸ್ಪತ್ರೆ ಸೇರಿದಂತೆ ವಿವಿಧ ಕಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ, ಡಾ.ಕೆ.ಟಿ.ತಿಪ್ಪೇಸ್ವಾಮಿ ಹಾಗೂ ಶೇಖರಗೌಡ ರಾಮತ್ನಾಳ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಕ್ಕಳ ಅಪೌಷ್ಟಿಕ ಪುನಃಶ್ಚೇತನ ಘಟಕಕ್ಕೆ 6 ಮಕ್ಕಳು ಒಪಿಡಿಯಿಂದ ದಾಖಲಾಗಿದ್ದನ್ನು ಪರಿಶೀಲಿಸಿದರು. ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಾರ ತೀವ್ರ ಅಪೌಷ್ಟಿಕತೆಯಿಂದ 825 ಮಕ್ಕಳು ಮತ್ತು 1250 ಕ್ಕೂ ಹೆಚ್ಚು ಸಾಧಾರಣ ಅಪೌಷ್ಟಿಕ ಮಕ್ಕಳು ಇದ್ದಾರೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ತಂಡದ ಮಾಹಿತಿ ಪ್ರಕಾರ 451 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇಷ್ಟೋಂದು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದರೆ ಸಂಬAಧಿಸಿದAತೆ ಅಧಿಕಾರಿಗಳು ಮಾತ್ರ ತಮಗೆ ಸಂಬAಧವೇ ಇಲ್ಲ ಎಂಬAತೆ ವರ್ತನೆ ಮಾಡುತ್ತಿರುವುದು ಆಯೋಗ ಬೇಸರ ವ್ಯಕ್ತಪಡಿಸಿದರು.

ತಾಯಿ ಮತ್ತು ಮಗು ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಆರೈಕೆ ಘಟಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರದಲ್ಲಿ ಸೆಖೆಯಿದೆ, ಎಸಿಗಳು ಎಕೆ ಬಂದ ಮಾಡಲಾಗಿದೆ ಎಂದು ಪ್ರಶ್ನಿಸಿದ ಆಯೋಗ ದಾಖಲಾದ ಮಕ್ಕಳು ಆರೋಗ್ಯದ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದರು. ಮಕ್ಕಳ ಮಾದರಿ ಚುಚ್ಚು ಮದ್ದು ಕೇಂದ್ರ, ಮಕ್ಕಳ ವಾರ್ಡ್ ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದರು.

ಡಿಎಚ್‌ಒ ಶಂಕರ್ ನಾಯಕ, ಆರ್.ಸಿ.ಎಚ್. ಅಧಿಕಾರ ಜಂಬಯನಾಯಕ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸುದೀಪ್ ಉಮಕಿ ಇತರರಿದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ತಂಡದವರು ಸಮನ್ವಯತೆಯ ತುರ್ತು ಸಭೆ ನಡೆಸಬೇಕು. ತೀವ್ರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಸಕಾಲದಲ್ಲಿ ದಾಖಲು ಮಾಡುವ ಮೂಲಕ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಮುಂದಾಗಲಿ. - ಶಶಿಧರ ಕೋಸಂಬೆ, ಸದಸ್ಯರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net