ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ

230123 Hospete Child Marriage Awarness
ಹೊಸಪೇಟೆಯಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಹೊಸ ಮಾರ್ಗಸೂಚಿ ಪುಸ್ತಕವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಶನ್ ಬಿ.ಮಾಡಲಗಿ ಬಿಡುಗಡೆಗೊಳಿಸಿದರು.
Published on

ಹೊಸಪೇಟೆ: ಮಕ್ಕಳ ಹಕ್ಕುಗಳ ಸಂರಕ್ಷಣೆ ಜೊತೆಗೆ ಕಾನೂನು ಪರಿಪಾಲನೆ ಕುರಿತು ಮಕ್ಕಳಿಗೆ ಜಾಗೃತಿ ಅಗತ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಶನ್ ಬಿ.ಮಾಡಲಗಿ ಹೇಳಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ, ಕ್ರೀಮ್ ಯೋಜನೆ ಹಾಗೂ ಡಾನ್ ಬೋಸ್ಕೋ ಸಂಸ್ಥೆಯಿಂದ ಶನಿವಾರ ಲಿಟಲ್ ಫ್ಲವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರಿಗೆ ಆರ್‌ಟಿಇ, ಪೋಕ್ಸೋ ಕಾಯ್ದೆ, ಜೆಜೆಬಿ ಹಾಗೂ ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಉಪಯುಕ್ತ ಮಾಹಿತಿ ನೀಡಲಾಯಿತು. ಬಾಲ್ಯವಿವಾಹ ನಿಷೇಧ ಕುರಿತ ಹೊಸ ಮಾರ್ಗಸೂಚಿ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net