ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವಿರಲಿ

news
ಹೊಸಪೇಟೆಯಲ್ಲಿ ಸೋಮವಾರ ಕಾನೂನು ಅರಿವು ಕಾರ್ಯಕ್ರಮ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ನ್ಯಾ.ಹೇಮಲತಾ ಬಿ.ಹುಲ್ಲೂರ ಉದ್ಘಾಟಿಸಿದರು.
Published on

ಹೊಸಪೇಟೆ: ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವಿದ್ದಲ್ಲಿ ಮುಂಬರುವ ದಿನಗಳಲ್ಲಿ ಅವರು ಉತ್ತಮ ಸಮಾಜ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹೇಮಲತಾ ಬಿ.ಹುಲ್ಲೂರ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಖಾಸಗಿ ಕಾಲೇಜಿನಲ್ಲಿ ಸೋಮವಾರ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅಧ್ಯಯನ ನಡೆಸಿ ಅರಿವು ಮೂಡಿಸಿಕೊಂಡು ಸಾರ್ವಜನಿಕರಿಗು ಸಹ ಕಾನೂನಿನ ತಿಳಿ ಹೇಳಬೇಕು. ಗ್ರಾಮೀಣ ಭಾಗದಲ್ಲಿ ಅಕ್ಷರಸ್ಥರು ಕಡಿಮೆ ಇರುವುದರಿಂದ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಈ ಕಾಯ್ದೆಯ ಬಗ್ಗೆ ಅರಿತು ಜಾಗೃತಿ ಮೂಡಿಸಬೇಕು. ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದರೆ ತಂದೆ, ತಾಯಿ, ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಿ. ಬಾಲ್ಯ ವಿವಾಹದ ಬಗ್ಗೆ ಮಕ್ಕಳಿಗೆ ತಿಳಿದು ಬಂದರೆ ಅದನ್ನು ತಿಳಿಸುವ ಕೆಲಸ ಆಗಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net