ಕಾನೂನು ಅರಿತರೆ ಪರಿವರ್ತನೆ ಸಾಧ್ಯ

05 MANJU 03
ಹೊಸಪೇಟೆಯಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಕ್ಕಳೊಂದಿಗೆ ಮುಕ್ತ ಸಂವಾದ ಹಾಗೂ ಮಕ್ಕಳಿಗೆ ಸಂಬAಧಿಸಿದ ಕಾಯ್ದೆಗಳ ಜಾಗೃತಿ ಕಾರ್ಯಕ್ರಮರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯ ಶಸಿಧರ್ ಕೋಸಂಬೆ ಉದ್ಘಾಟಿಸಿದರು.
Published on

ಹೊಸಪೇಟೆ: ಮಕ್ಕಳ ಹಕ್ಕುಗಳಿಗೆ ಧಕ್ಕೆ ಬಂದರೆ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದರೆ ಮಾತ್ರ ಮಕ್ಕಳ ರಕ್ಷಣಾ ಕಾಯ್ದೆಗಳ ಪೂರಕ ಅನುಷ್ಠಾನ ಸಾದ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯ ಶಸಿಧರ್ ಕೋಸಂಬೆ ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಕ್ಕಳೊಂದಿಗೆ ಮುಕ್ತ ಸಂವಾದ ಹಾಗೂ ಮಕ್ಕಳಿಗೆ ಸಂಬAಧಿಸಿದ ಕಾಯ್ದೆಗಳ ಜಾಗೃತಿ ಕಾರ್ಯಕ್ರಮ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು.

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ತಿಳಿದಿರಬೇಕು. ಮಕ್ಕಳಿಗಾಗಿ ರೂಪಿಸಿರುವ ಕಾನೂನುಗಳಾದ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಅಧಿನಿಯಮ, ಪೋಕ್ಸೋ ಕಾಯ್ದೆ, ಬಾಲನ್ಯಾಯ ಅಧಿನಿಯಮ, ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ, ಶೋಷಣೆ, ಮತ್ತು ಲೈಂಗಿಕ ಕಿರುಕುಳದಿಂದ ಅವರನ್ನು ರಕ್ಷಿಸಲು ಜಾರಿಮಾಡಿದ ಕಾಯಿದೆಗಳ ಸಂಪೂರ್ಣ ಅರಿತುಕೊಳ್ಳಬೇಕು. ಒಬ್ಬ ವಿದ್ಯಾರ್ಥಿ ಕಾನೂನುಗಳ ಬಗ್ಗೆ ತಿಳಿದುಕೊಂಡರೆ ಒಂದು ಕುಟುಂಬ ಪರಿವರ್ತನೆಯಾಗುತ್ತದೆ ಎಂದರು.

ಮಕ್ಕಳ ಹಕ್ಕುಗಳ ನಿರ್ದೇಶನಾಲಯದ ನಿರ್ದೇಶಕ ಡಾ.ಎಂ.ಆರ್.ರವಿ ಮಾತನಾಡಿ, ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದರೆ ಅಥವಾ ಒಳಗಾದವರ ತಮ್ಮ ಸ್ನೇಹಿತರ ಬಗ್ಗೆ ತಿಳಿದರೆ ಕೂಡಲೆ ಮಕ್ಕಳ ಸಹಾಯವಾಣಿಗೆ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಮಕ್ಕಳ ರಕ್ಷಣಾ ಮತ್ತು ಸಂರಕ್ಷಣಾ ಕಾಯ್ದೆ ಪ್ರಕಾರ ಹುಡುಗಿಯ ಮನಸ್ಸಿಗೆ ವಿರುದ್ದವಾಗಿ ಮದುವೆ ಮಾಡಿದರೆ ಪ್ರತಿಯೊಬ್ಬರೂ ಶಿಕ್ಷೆಗೆ ಗುರಿಯಾಗುತ್ತಾರೆ. ಸಮಾನತೆ, ಶಿಕ್ಷಣ, ಆರೋಗ್ಯ, ಮತ್ತು ಶೋಷಣೆಯಿಂದ ಮುಕ್ತವಾಗಿರುವ ಹಕ್ಕುಗಳು ಸೇರಿವೆ. ಆದರೆ, ಬಡತನ, ಅಸಮಾನತೆ, ಮತ್ತು ದೌರ್ಜನ್ಯಗಳಂತಹ ಅಡೆತಡೆಗಳು ಇನ್ನೂ ಮಕ್ಕಳ ಹಕ್ಕುಗಳತ್ತ ಧಕ್ಕೆ ತರುತ್ತಿವೆ ಎಂದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಎಸ್ಪಿ ಬಿ.ಎಲ್.ಶ್ರೀಹರಿ ಬಾಬು, ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್.ಶ್ವೆತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ ಉಂಕಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net