ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published on

ಹೊಸಪೇಟೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.01 ರಂದು ನಡೆಯಲಿರುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗೆ ನೀಡುವ ರಾಜ್ಯ ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಒಂದು ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ನಗರದ ತಾಲ್ಲೂಕು ಪಂಚಾಯತಿ ಆವರಣದಲ್ಲಿನ ಕಲ್ಯಾಣಾಧಿಕಾರಿಗಳ ಕಚೇರಿಗೆ ನೇರವಾಗಿ ಆ.31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dwdsc.karnataka.gov.in ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net