ಯುವಜನತೆ ತಂತ್ರಜ್ಞಾನದಿಂದ ಸಾಧನೆ ಮಾಡಿ

19 MANJU 04
Published on

ಹೊಸಪೇಟೆ: ಯುವಜನತೆಯು ತಂತ್ರಜ್ಞಾನದಿಂದ ಸಾಧನೆ ಮಾಡಲು ಒಂದು ಉತ್ತಮ ಅವಕಾಶವಾಗಿದ್ದು, ಅದನ್ನು ಸದ್ಬಳಕೆ ಮಾಡಿಕೊಳಬೇಕು ಎಂದು ಕೊಪ್ಪಳ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಹೇಳಿದರು.

ನಗರದ ಶಂಕರ ಆನಂದ ಸಿಂಗ್ ಸರ್ಕಾರಿ ಪದವಿ ಕಾಲೇಜಿನಲ್ಲಿ ಸರ್ವ ಸಂಘಗಳ ಉದ್ಘಾಟನೆ ಮತ್ತು ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಯಾವುದೇ ವಿಷಯದಲ್ಲಿ ಆಗಲಿ ಆಸಕ್ತಿ ಇದ್ದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ. ಆಸಕ್ತಿಯಿಂದ ಅಧ್ಯಯನ ಮಾಡಿದ್ದಲ್ಲಿ ತಾವು ತೆಗೆದುಕೊಂಡ ವಿಷಯದಲ್ಲಿ ಉನ್ನತ ಮಟ್ಟಕ್ಕೆ ಏರಬಹುದು. ಸಾಧನೆಯನ್ನು ಮಾಡಬಹುದು. ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದರ ಮೂಲಕ ಮುಂದಿನ ಭವಿಷ್ಯದ ನಾಯಕರಾಗಲು ಅವಕಾಶವಿರುತ್ತದೆ ಎಂದರು.

ಕಾರ್ಯಕ್ರಮದ ಸಂಚಾಲಕ ಡಾ. ನಾಗಣ್ಣ ಕಿಲಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಗೆ ಪೂರಕವಾದ ವಾತಾವರಣ ನಿರ್ಮಿಸಲು ಬೋಧಕ ಸಿಬ್ಬಂದಿ ಸದಾ ಸಿದ್ಧರಿರುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಜಿ.ಹೆಬಸೂರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಪಿಕೆ ಪ್ರಶಸ್ತಿ ಪುರಸ್ಕೃತ ಡಾ.ನಾಗಣ್ಣ ಕಿಲಾರಿ, ಇತ್ತೀಚೆಗೆ ಡಾಕ್ಟರೇಟ್ ಪದವಿ ಪಡೆದ ವಾಣಿಜ್ಯಶಾಸ್ತ್ರ ವಿಭಾಗದ ಸುರೇಶ್ ಬೂದನೂರು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net