ಕಾಂಗ್ರೆಸ್ಸಿಗರನ್ನು ಸದೆಬಡಿಯಲು ಸಿಬಿಐ ದುರ್ಬಳಕೆ

Siraj Shaik
ಸಿರಾಜ್ ಶೇಖ್ ಆರೋಪ
Published on

ಹೊಸಪೇಟೆ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, ಬೆಂಬಲಿಗರನ್ನು ಬೆದರಿಸಲು ಕೇಂದ್ರದ ಬಿಜೆಪಿ ಸರ್ಕಾರ ವಿವಿಧ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಿರಾಜ್ ಶೇಖ್ ಆರೋಪಿಸಿದ್ದಾರೆ.

ಹೆದರಿಕೆಯ ವಾತಾವರಣ ಸೃಷ್ಟಿ

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರ ಇಡಿ, ಸಿಬಿಐ, ಐಟಿಯಂಥ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳು, ಬೆಂಬಲಿಗರು, ಹಿತೈಷಿಗಳನ್ನು ಬೆದರಿಸುವ ಕೆಲಸಕ್ಕೆ ಮುಂದಾಗಿದೆ. ಈ ಮೂಲಕ ಅವರನ್ನು ಈ ಬಾರಿ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿಯುವಂತೆ ಮಾಡುವುದು, ಹೆದರಿಕೆಯ ವಾತಾವರಣ ಸೃಷ್ಟಿಸುವುದು ಅವರ ಉದ್ದೇಶ ಎಂದು ದೂರಿದ್ದಾರೆ.

ಬಿಜೆಪಿಗೆ ಲಾಭವಾಗುವುದಿಲ್ಲ

ತನಿಖಾ ಸಂಸ್ಥೆಗಳ ದಾಳಿ ಮೂಲಕ ಕಾಂಗ್ರೆಸ್ಸಿಗರ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆ ಮೂಡಿಸುವ ಹುನ್ನಾರ ನಡೆಸಿದೆ. ಇಂತಹ ಪ್ರಯತ್ನಕ್ಕೆ ಜನರು ಮಣೆ ಹಾಕುವುದಿಲ್ಲ. ಈ ರೀತಿಯ ದುಷ್ಕೃತ್ಯದ ಬಗ್ಗೆ ಕಾಂಗ್ರೆಸ್ಸಿಗರು ಹೆದರುವ ಅಗತ್ಯವಿಲ್ಲ. ಇದರಿಂದ ಬಿಜೆಪಿಗೂ ಯಾವುದೇ ರೀತಿಯ ಲಾಭವಾಗುವುದಿಲ್ಲ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕಾಂಗ್ರೆಸ್ಸಿಗರು ಒಟ್ಟಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರತ್ನಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net