ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಲಿ

20 MANJU 01
Published on

ಹೊಸಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಗೂಂಡ ವರ್ತನೆಯನ್ನು ಖಂಡಿಸಿ ನಗರದ ಪುನೀತ್ ವತ್ತದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಯಿತು.

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ರಾಷ್ಟ್ರ ಕಂಡತ ಪ್ರಬುದ್ಧ ರಾಜಕಾರಣಿಗಳಲ್ಲೊಬ್ಬರು, ಅವರು ಸಂವಿಧಾನದ ಸಂವಿಧಾನ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಗೌರವ ಇಟ್ಟಕೊಂಡಂತವರು. ಕಾಂಗ್ರೆಸ್ ಆಡಳಿತ ಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ನಡೆಸಿಕೊಂಡಿರುವ ರೀತಿಯನ್ನು ಸದನದಲ್ಲಿ ಹೇಳಿದ್ದಾರೆ ಹೊರತು ಸಂವಿಧಾನ ವಿರೋಧಿ ಮಾತನ್ನು ಹೇಳಿಲ್ಲ. ಇದನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವಿಸ್ತರಿಸಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತಿದೆ ಹಾಗೂ ಬೆಳಗಾವಿಯಲ್ಲಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ಅಮಾನುಷವಾಗಿ ನಡೆಸಿಕೊಂಡ ರೀತಿ ನೋಡಿದರೆ ರಾಜ್ಯ ಸರ್ಕಾರ ಎಷ್ಟರ ಮಟ್ಟಿಗೆ ತುಘಲಕ್ ಆಡಳಿತ ನಡೆಸುತ್ತಿದೆ ಎಂಬುದು ತೋರಿಸುತ್ತಿದೆ. ವಿಧಾನಸೌದದಲ್ಲಿ ಮಾರ್ಷಲ್ ಅವರ ಸಮ್ಮುಖದಲ್ಲೆ ಕೆಲವರು ಗೂಂಡ ವರ್ತನೆ ಮಾಡಿದ್ದು ಕಾನೂನು ಸುವ್ಯವಸ್ಥೆ ದುರ್ಬಲಗೊಂಡೆ. ಕೂಡಲೆ ಸಿ.ಟಿ.ರವಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಓಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಅಯ್ಯಳ್ಳಿ ತಿಮ್ಮಪ್ಪ, ಜಿಲ್ಲಾ ಉಪಾಧ್ಯಕ್ಷ ಭರಮನ ಗೌಡ, ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ, ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಕಮಟಗಿ, ಪ್ರಮುಖರಾದ ರೇವಣ ಸಿದ್ದಪ್ಪ, ಮಧುರಚನ್ನಶಾಸ್ತ್ರಿ, ಮಧುಸೂದನ್, ಸಾಲಿ ಸಿದ್ದಯ್ಯ, ಸೂರಿ ಬಂಗಾರು, ಚಂದ್ರು ದೇವಲಾಪುರ ಇತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net