ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಿ

09 MANJU 08
Published on

ಹೊಸಪೇಟೆ: ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಬೇಕು ಎಂದು ಜಿ.ಪಂ. ಸಿಇಒ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಶಾ ಹೇಳಿದರು.

ಜಿಲ್ಲಾ ಪಂಚಾಯತಿ ಸಿಇಓ ಕಚೇರಿಯಲ್ಲಿ ಇತ್ತಿಚೆಗೆ ನಡೆದ ರಾಷ್ರ್ಟೀಯ ಬಾಲಸ್ವಾಸ್ಥ ಕಾರ್ಯಕ್ರಮ, ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕಾರ್ಯಕ್ರಮದ ಅಂತರ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ಪ್ರತಿ ಶಾಲೆಗಳಿಗೆ ಭೇಟಿ ನೀಡಿ ಲಸಿಕೆಗಳನ್ನು ಒದಗಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಶೇ.100 ರಷ್ಟು ಹಾಜರಾತಿ ಇರುವಂತೆ ಮುಂಜಾಗೃತೆ ವಹಿಸಬೇಕು. ಲಸಿಕೆಯಿಂದ ವಂಚಿತರಾದ ಮಕ್ಕಳನ್ನು ಸರ್ವೇ ಮೂಲಕ ಪತ್ತೆ ಹಚ್ಚಿ ಅಭಿಯಾನದ ಮಾದರಿಯಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯವಾಗಬೇಕು. ಅಶಾ ಕಾರ್ಯಕರ್ತೆಯರ ಕೊರತೆಯಿದ್ದಲ್ಲಿ ಆಯಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರ ಜತೆಗೂಡಿ ಲಸಿಕೆ ವಿತರಣೆಗೆ ಕೈಜೋಡಿಸಬೇಕು. ಲಸಿಕೆ ಕೊರತೆಯಿಂದ ನ್ಯೂನತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ ಸೂಕ್ತ ಕ್ರಮವಹಿಸಬೇಕು. ಎಲ್ಲಾ ಮಕ್ಕಳಿಗೆ ಸಮರ್ಪಕವಾಗಿ ಲಸಿಕೆ ಸಿಗುವಂತಾಗಲು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಡಿಎಚ್‌ಒ ಡಾ.ಶಂಕರ್ ನಾಯ್ಕ್, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಭಾರತೀಯ ಮಕ್ಕಳ ವೈದ್ಯರ ಸಂಘದ ಅಧ್ಯಕ್ಷ ಡಾ.ರಾಜೀವ್, ಶಿಕ್ಷಣ ಇಲಾಖೆ ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net