ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ

19 MANJU 01
Published on

ಹೊಸಪೇಟೆ: ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಬಿಸಿಯೂಟ ಸೇರಿ ಶುಚಿ, ರುಚಿ, ಸ್ವಾಸ್ಥö್ಯದೊಂದಿಗೆ ಮಕ್ಕಳ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಜಯ ವಿಠಲ ಸಭಾಂಗಣದಲ್ಲಿ ಏರ್ಪಡಿಸಿದ್ದ ಅತಿಸಾರ ಭೇದಿ ನಿಯಂತ್ರಣ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಶುಕ್ರವಾರ ಮಾತನಾಡಿದರು.

ಜಿಲ್ಲೆಯಲ್ಲಿ ತೀವ್ರ ಅತಿಸಾರದಿಂದ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವುದನ್ನು ಗುರಿಯಾಗಿಸಿ ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮುಖ್ಯವಾಗಿ ಅತಿಸಾರ ಭೇದಿಯ ನಿಯಂತ್ರಣದ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯತೆ ಮುಖ್ಯ. ತಮ್ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಿ ಎಂದರು.

ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಮಾತನಾಡಿ, ಅನಿಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದು, 10ನೇ ತರಗತಿ ವರೆಗೆ ವಿದ್ಯಾರ್ಥಿಗಳಿಗೆ ರಕ್ತಹೀನತೆಯನ್ನು ತಪಾಸಣೆ ಮಾಡಲಾಗುವುದು. ಖ.31 ರ ವರಗೆ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ ಆರ್‌ಬಿಎಸ್‌ಕೆ ತಂಡಗಳು ಶಾಲೆ ಮತ್ತು ಅಂಗನವಾಡಿಗೆ ಭೇಟಿ ನೀಡುವ ಸಮಯದಲ್ಲಿ ಶೇ.100 ರಷ್ಟು ಹಾಜರಾತಿ ಇರುವಂತೆ ನೋಡಿಕೊಳ್ಳಬೇಕು. ಸಾಮೂಹಿಕ ತಪಾಸಣೆ ಮೂಲಕ ಮಕ್ಕಳಲ್ಲಿರುವ ರಕ್ತಹೀನತೆಯನ್ನು ಗುರುತಿಸಿ ಚಿಕಿತ್ಸೆ ನೀಡಲಾಗುವುದು ಎಂದರು.

ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ಗೌಡ, ಜಿಲ್ಲಾ ಮಲೇರಿಯಾ ನಿರ್ಮೂಲನಾಧಿಕಾರಿ ಡಾ.ಸತೀಶ್‌ಚಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net