

ಹೊಸಪೇಟೆ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸೇರಿದಂತೆ ಇಲಾಖೆಗಳ ಸಹಯೋಗದಲ್ಲಿ ನಗರದ ತಾಲೂಕು ಕಚೇರಿಯ ವಿದ್ಯಾರಣ್ಯ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಾಗೂ ಮಾನವ ಹಕ್ಕುಗಳ ದಿನಾಚರಣೆ ನಡೆಯಿತು.
ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ ಮಾತನಾಡಿ, ಗ್ರಾಹಕರು ತಾವು ಖರೀದಿಸುವ ಸರಕು ಅಥವಾ ಸೇವೆಗಳಲ್ಲಿ ಯಾವುದೇ ರೀತಿಯ ಲೋಪದ ಸರಕುಗಳು, ಸಮಧಾನಕರವಲ್ಲದ ವ್ಯಾಪಾರ ಪದ್ದತಿಗಳು ಕಂಡುಬAದರೆ ಅದರ ವಿರುದ್ಧ ಸುರಕ್ಷೆ ಪಡೆಯಲು ಕಾನೂನಿನಲ್ಲಿ ಅವಕಾಶವಿದೆ. ಸಾಂಘಿಕ ಸಮುದಾಯದಲ್ಲಿರುವ ಪ್ರತಿಯೊಬ್ಬರು ಗ್ರಾಹಕರೇ ಆಗಿರುವುದರಿಂದ ಸಂರಕ್ಷಣಾ ಕಾಯಿದೆ ಬಗ್ಗೆ ಅರಿವು ಪಡೆದುಕೊಂಡು ಕಾಯಿದೆಯ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದರು.
ಸಿವಿಲ್ ನ್ಯಾಯಾಧೀಶೆ ಜೆ.ಚೈತ್ರ ಮಾತನಾಡಿ, ಬದುಕುವ ಹಕ್ಕು ಎಲ್ಲರಿಗೂ ಇದೆ. ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ವಸತಿ, ಆಹಾರ ಹಾಗೂ ಬಟ್ಟೆ. ಇವುಗಳಿಲ್ಲದೆ ಮನುಷ್ಯನ ಜೀವನವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಬದುಕಿನ ಹಕ್ಕನ್ನು ಕಸಿಯುವುದು, ಅವರಿಗೆ ಹಿಂಸೆ ನೀಡುವುದು ಇತ್ಯಾದಿ ಇದರ ವ್ಯಾಪ್ತಿಯೊಳಗೆ ಬರುತ್ತವೆ. ಯಾವುದೇ ಧರ್ಮ, ಜಾತಿ, ಲಿಂಗ, ಜನಾಂಗ, ಬಣ್ಣ, ಭಾಷೆ, ರಾಜಕೀಯ ಅಥವಾ ಇತರೆ ಅಭಿಪ್ರಾಯಗಳು, ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲಾ ಮಾನವರು ಸಮಾನರು. ವ್ಯಕ್ತಿಯ ಜೀವನ, ಸ್ವಾತಂತ್ರ‍್ಯ, ಸಮಾನತೆ ಮತ್ತು ಘನತೆಗೆ ಸಂಬAಧಿಸಿದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬರ ಮತ್ತೂರು, ತಹಸೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ, ಸಿಡಿಪಿಒ ಸಿಂಧು ಅಂಗಡಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸ ಮೂರ್ತಿ, ಅಹಾರ ಶಿರಸ್ತೇದಾರ ಜಿ.ಎಚ್.ರುದ್ರಪ್ಪ, ಕಾರ್ಮಿಕ ನಿರೀಕ್ಷಕ ಶಿವಶಂಕರ.ಬಿ.ತಳವಾರ ಇತರರಿದ್ದರು.