ಸಿಲಿಂಡರ್ ಸ್ಪೋಟ ತಾಯಿ ಮಗ ಸಾವು

Oplus_131072
Oplus_131072
Published on

ಹೊಸಪೇಟೆ: ಇತ್ತೀಚೆಗೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಳುಗಳಾಗಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಕೀಲ ಹಾಲಪ್ಪ(43) ತಾಯಿ ಗಂಗಮ್ಮ(80) ಮೃತಪಟ್ಟಿದ್ದಾರೆ. ರಾಜ್ಯ ಸರ್ಕಾರ ತಲ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Oplus_131072
Oplus_131072

ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸೆ.27 ರಂದು ಸಿಲಿಂಡರ್ ಸ್ಪೋಟವಾಗಿ 11 ಜನರು ಗಾಯಗೊಂಡಿದ್ದರು. ಗಾಯಾಳುಗಳನ್ನು ತೋರಣಗಲ್ಲು ಸಂಜೀವಿನ ಆಸ್ಪತ್ರೆ ಸೇರಿದಂತೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹಾಲಪ್ಪ ಗುರುವಾರ ರಾತ್ರಿ ಮೃತಪಟ್ಟರೆ, ಗಂಗಮ್ಮ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಜಮೀರ್ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸರ್ಕಾರದ ಪರವಾಗಿ ಮೃತರಾದ ಹಾಲಪ್ಪ ಹಾಗೂ ಗಂಗಮ್ಮ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದರು. ಘಟನೆಯಿಂದ ಮನೆಗೆ ಹಾನಿಯಾಗಿದ್ದು ವೈಯಕ್ತಿಕ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ತಿಳಿಸಿದರು.

ನಂತರ ಆಂಬುಲೆನ್ಸ್ ಮೂಲಕ ಮೃತರನ್ನು ಸ್ವಾಗ್ರಾಮಕ್ಕೆ ಕಳುಹಿಸಿಕೊಡಲು ಸಚಿವರು ವ್ಯವಸ್ಥೆ ಮಾಡಿಕೊಟ್ಟರು. ಅಂತ್ಯಕ್ರಿಯೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ಕವಿತಾ ಮಣ್ಣಿಕೇರಿ ಅವರಿಗೆ ಸೂಚನೆ ನೀಡಿದ್ದಾರೆ. ಗ್ರಾಮಕ್ಕೆ ಬಂದ ಕೂಡಲೇ ಅಂತ್ಯಸAಸ್ಕರಾರ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net