ಡಿಡಿಪಿಐ ಮತ್ತು ಬಿಇಒ ಅಮಾನತ್ತಿಗೆ ಸಿಎಂ ಸೂಚನೆ

Ddpi
ವಿಜಯನಗರ ಡಿಡಿಪಿಐ ಯುವರಾಜ್ ನಾಯ್ಕ
Published on

ಹೊಸಪೇಟೆ: ಎಸ್ಎಸ್ಎಲ್ ಸಿಯಲ್ಲಿ ಜಿಲ್ಲೆ ಕಡಿಮೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಡಿಡಿಪಿಐ ಯುವರಾಜ ನಾಯ್ಕ, ಬಿಇಒ ಅವರಿಗೆ ಅಮಾನತ್ತಿಗೆ ಸೂಚನೆ ನೀಡಿ, ಜಿ.ಪಂ. ಸಿಇಒ ಗೆ ಸದಾಶಿವ ಬಿ.ಪ್ರಭುಗೆ ನೋಟಿಸ್ ಜಾರಿ ಮಾಡಿದರು

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ಜಿಲ್ಲೆ 10 ನೇ ಸ್ಥಾನದಿಂದ 27 ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಕೆಂಡಮಡಲರಾದ ಸಿಎಂ ಸಿದ್ದರಾಮಯ್ಯ ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಡಿಡಿಪಿಐ ಡಿಡಿಪಿಐ ಅವರನ್ನು ಪ್ರಶ್ನಿಸಿದರು.
ಎಸ್ಎಸ್ಎಸ್ಸಿ ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಿಲಿತಾಂಶ ಪ್ರಮಾಣ ಕುಸಿದಿರುವುದಕ್ಕೆ ನೀವೇ ಕಾರಣ. ಬಿಇಒಗಳ, ಶಿಕ್ಷಕರ ಪ್ರಯತ್ನ ಏನು? ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ನಿಮ್ಮ ಪ್ರಯತ್ನ? ಈ ಕಳಪೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ. ಈ ಬಾರಿ ಶೇ.20 ರಷ್ಟು ಗ್ರೇಸ್ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದ್ದೀರಿ ಎಂದರೆ ನಿಮ್ಮ ಸಾಧನೆ ಏನಿದೆ ಎಂದು ಸಿಎಂ ಡಿಡಿಪಿಐಗೆ ಪ್ರಶ್ನಿಸಿದರು. ಇನ್ನೂ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕಲ್ವ ಎಂದು ಸಿಇಒ ಸದಾಶಿವ ಪ್ರಭುಗೆ ಹೇಳಿದರು.
ಸಿಎಂ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್ ಅವರಿಗೆ ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಸಂಪರ್ಕಿಸಿ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿ, ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು. ನಂತರ ಡಿಡಿಪಿಐ ಅವರನ್ನು ಉಸ್ತುವಾರಿ ಸಚಿವ ಜಮೀರ್ ಅಹಮದ್ ಸಭೆಯಿಂದ ಹೊರಗೆ ನಡೆಯುವಂತೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net