ತಂತ್ರಾಂಶಗಳಿಂದ  ಒತ್ತಡ ಹೇರದಿರಿ

27 MANJU 01
Published on

ಹೊಸಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿAದ ನಗರದ ಜಿಲ್ಲಾಧಿಕಾರಿ ಮುಂದೆ ಶುಕ್ರವಾರ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಿದರು.

ಇಲಾಖೆಯಿಂದ ಅಭಿವೃದ್ದಿ ಪಡಿಸಿರುವ ಸುಮಾರು 21ಕ್ಕೂ ಅಧಿಕ ಮೊಬೈಲ್-ವೆಬ್ ತಂತ್ರಾAಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದಾರೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಲ್ಯಾಪ್ ಟಾಪ್, ಅದಕ್ಕೆ ಅವಶ್ಯಕವಾಗಿರುವ ಇಂಟರ್ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು ಸಾವು ಆಗುತ್ತಿದೆ. ಅಲ್ಲದೆ ಕಂದಾಯ ಇಲಾಖೆಯ ಮೂರು ವರ್ಷ ಸೇವೆ ಪರಿಗಣಿಸಿ ಅಂತರ ಜಿಲ್ಲಾ ವರ್ಗಾವಣೆಗೆ ಹೊಸ ಮಾರ್ಗ ಸೂಚಿ ರಚಿಸಬೇಕು. ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು. ಮೊಬೈಲ್ ತಂತ್ರಾAಶಗಳ ಕೆಲಸದ ವಿಚಾರವಾಗಿ ಇದುವರೆಗೆ ಆಗಿರುವ ಎಲ್ಲಾ ಅಮಾನತುಗಳನ್ನು ತಕ್ಷಣವೇ ರದ್ದು ಪಡಿಸಿ ಆದೇಶ ಹಿಂಪಡೆಯಬೇಕು. ಪ್ರಯಾಣ ಭತ್ತೆ ದರವನ್ನು 500 ರೂ. ಬದಲಾಗಿ 3 ಸಾವಿರ ರೂ. ಹೆಚ್ಚಿಸಬೇಕು ಎಂಬ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.

ನಾವು ತಾಂತ್ರಿಕವಾಗಿ ಅನುಭವ ಹೊಂದಿರುವ ಸಿಬ್ಬಂದಿಯಲ್ಲ. ಆದರೂ, ಸರ್ಕಾರ ವಹಿಸಿದ ತಾಂತ್ರಿಕ ಕೆಲಸಗಳನ್ನು ಮಾಡುತ್ತಿದ್ದೇವೆ. ನಾವು ಮೂಲಸೌಕರ್ಯ ವಿಚಾರವಾಗಿ ಕಡೆಗಣನೆಗೆ ಒಳಗಾಗಿದ್ದೇವೆ. ಹಾಗಾಗಿ, ಕೆಲಸಕ್ಕೆ ಸಾಮೂಹಿಕವಾಗಿ ರಜೆ ಹಾಕಿ ಧರಣಿ ಮಾಡುತ್ತಿದ್ದೇವೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಕಲ್ಪಿಸಬೇಕು. ಗುಣಮಟ್ಟದ ಪೀಠೋಪಕರಣಗಳು, ಅಂತರ್ಜಾಲ ವ್ಯವಸ್ಥೆಯನ್ನು ಒದಗಿಸಬೇಕು. ಸಂಯೋಜನೆ, ಇ-ಆಫೀಸ್, ಗರುಡ, ಭೂಮಿ, ನವೋದಯ, ದಿಶಾಂಕ ಮತ್ತಿತರ ತಂತ್ರಾAಶಗಳ ನಿರ್ವಹಣೆಗೆ ಹೆಚ್ಚಿನ ಡೇಟಾ ಸಾಮರ್ಥ್ಯದ ಸ್ಮಾರ್ಟ್ಫೋನ್‌ಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಯಂಕಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಸಿ.ಗುರುಬಸವರಾಜ, ಉಪಾಧ್ಯಕ್ಷ ವೀರೇಶ್, ತಾಲೂಕು ಅಧ್ಯಕ್ಷ ರವಿಚಂದ್ರ ಗೊಗ್ಗಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಮಲ್ಲಿಕಾರ್ಜುನಗೌಡ, ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಟಿ.ಪಕ್ಕೀರಪ್ಪ, ಪ್ರಮುಖರಾದ ಬಸವರಾಜ, ಮಲ್ಲೇಶ್ ನಾಯ್ಕ, ಶಶಿಕುಮಾರ್, ಜ್ಯೋತಿ ಬಾಯಿ, ಮರುಳಸಿದ್ದಪ್ಪ, ದೇವೇಂದ್ರಪ್ಪ, ವೀರಭದ್ರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net