

ಹೊಸಪೇಟೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಸೆ.15ರಂದು ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನಗರ ಸೇರಿದಂತೆ ಜಿಲ್ಲೆಯ ಜನರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್ ಹಾಗೂ ಶಾಸಕರಾದ ಎಚ್.ಆರ್.ಗವಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದರು.
ಮುಖ್ಯಮಂತ್ರಿ ಮಾರ್ಗದರ್ಶನದಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆವರೆಗೆ ಈ ಕಾರ್ಯಕ್ರಮವು ನಡೆಯುತ್ತಿದೆ. ಪ್ರತಿಯೊಬ್ಬರು ಸ್ವ ಇಚ್ಚೆಯಿಂದ ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ.