

ಹೊಸಪೇಟೆ: ನಗರದ ಬಾಲಕೀಯರ ವಿದ್ಯಾರ್ಥಿ ನಿಲಯಗಳಿಗೆ ಶುಕ್ರವಾರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳ ದೂರಿನ ಮೇರೆಗೆ ನಗರದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕೀಯರ ವಿದ್ಯಾರ್ಥಿ ನಿಲಯ, ಜಂಬುನಾಥ ರಸ್ತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ. ಆರ್. ಆಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಆಹಾರ ಪೂರೈಕೆ, ಸ್ವಚ್ಚತೆ , ಕುಡಿವ ನೀರು ಹಾಗೂ ಇತರೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ ನಂತರ ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿದರು. ಕಡ್ಡಾಯವಾಗಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಡುವಂತೆ ಹಾಗೂ ಆಹಾರ ತಯಾರಿಕೆಯಲ್ಲಿ ಸ್ವಚ್ಚತೆ ಜತೆಗೆ ಶುಚಿ ರುಚಿಯಾದ ಆಹಾರವನ್ನು ವೇಳಾ ಪಟ್ಟಿಗೆ ಅನುಗುಣವಾಗಿ ಪೂರೈಸ ಬೇಕು. ಶುಧ್ದ ಕುಡಿವ ನೀರಿನ ವ್ಯವಸ್ಥೆ ಹಾಗೂ ರುಚಿಯಾದ ಅಡುಗೆ ತಯಾರಿಕೆ ಬಗ್ಗೆ ಹಾಗೂ ಹಾಜರಾತಿ ನಿರ್ವಹಣೆಯಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬAಧಿಸಿದAತೆ ಹೆಚ್ಚಿನ ಪುಸ್ತಕಗಳ ಸಂಗ್ರಹಣೆ ಮಾಡಿ ವಿದ್ಯಾರ್ಥಿಗಳಿಗೆ ಸಹಕಾರವಾಗುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.