ದೇವದಾಸಿಯರ ಮರು ಸಮೀಕ್ಷೆ ನಡೆಯಲಿ

B Malamma
ಬಿ.ಮಾಳಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೇವದಾಸಿ ವಿಮೋಚನಾ ಸಂಘ.
Published on

ಹೊಸಪೇಟೆ: ಸಮೀಕ್ಷೆಯಲ್ಲಿ ಬಿಟ್ಟುಹೋಗಿರುವ ದೇವದಾಸಿ ಮಹಿಳೆಯರನ್ನು ಗುರುತಿಸಲು ಮರು ಸಮೀಕ್ಷೆಗೆ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ತೀರ್ಮಾನಿಸಬೇಕು ಎಂದು ದೇವದಾಸಿ ವಿಮೋಚನಾ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಮಾಳಮ್ಮ ಒತ್ತಾಯ.

ರಾಜ್ಯದಲ್ಲಿ ನಾನಾ ಕಾರಣಗಳಿಂದ ಸಾವಿರಾರು ದೇವದಾಸಿ ಮಹಿಳೆಯರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ. ಅವರಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ವಿಮುಕ್ತ ದೇವದಾಸಿಯರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ, ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ನಡೆಸಿದ ನಿರಂತರ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ. ನಿನ್ನೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮರು ಸಮೀಕ್ಷೆ ಕುರಿತು ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ನಿರ್ಣಯಿಸುವ ಅಭಿಪ್ರಾಯಕ್ಕೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಅಧಿವೇಶನದಲ್ಲಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಒಪ್ಪಿಗೆ ನೀಡಬೇಕು ಎಂದು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಇಂದಿನ ದಿನಗಳಲ್ಲಿ ಎಲ್ಲ ಬೆಲೆಗಳು ಏರಿಕೆಯಾಗಿದ್ದರಿಂದ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ. ಆದ್ದರಿಂದ ಈಗಿರುವ ಮಾಸಾಶನವನ್ನು 1500 ದಿಂದ 3000 ರೂ.ಗೆ ಹೆಚ್ಚಿಸಬೇಕು. ದೇವದಾಸಿ ಮಹಿಳೆಯರ ಮಕ್ಕಳ ಉನ್ನತ ಶಿಕ್ಷಣ, ಹಾಸ್ಟೆಲ್ ಶಾಲೆ ಮತ್ತು ವಸತಿ ನಿಲಯಗಳಿಗೆ ಪರೀಕ್ಷೆ, ಅಂಕಗಳನ್ನು ಪರಿಗಣಿಸದೆ ನೇರ ಪ್ರವೇಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಸ್ವಾಮಿ, ಪ್ರಮುಖರಾದ ಕೆ.ನಾಗರತ್ನಮ್ಮ, ಎಸ್.ಯಲ್ಲಮ್ಮ, ಹಂಪಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net