ಅಭಿವೃದ್ಧಿ, ಸಾಮಾಜಿಕ ನ್ಯಾಯ ನಾಣ್ಯದ ಎರಡು ಮುಖ

01 MANJU 02
Published on

ಹೊಸಪೇಟೆ: ಅಭಿವೃದ್ಧಿ ಎಂದರೆ ಕೇವಲ ಆರ್ಥಿಕ ಬೆಳವಣಿಗೆಯಲ್ಲ, ಅದು ಜನಸಾಮಾನ್ಯರಿಗೆ ತಲುಪುವ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಮಾನವೀಯ ಆಯಾಮಗಳನ್ನು ಒಳಗೊಂಡಿರುವ ಸಮಗ್ರ ಪ್ರಕ್ರಿಯೆಯಾಗಿದೆಂದು ಡಾ.ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತç ವಿವಿಯ ಕುಲಪತಿ ಡಾ.ವಿಶ್ವನಾಥ ಅಭಿಪ್ರಾಯಪಟ್ಟರು.

ಕನ್ನಡ ವಿವಿಯ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಗುರುವಾರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು. 75 ವರ್ಷಗಳಿಂದ ಆರ್ಥಿಕ, ರಾಜಕೀಯ, ಸಾಮಾಜಿಕ ಹಾಗೂ ಸಮಾನತೆಯ ಅಭಿವೃದ್ಧಿ ಪರಿಕಲ್ಪನೆಗಳನ್ನು ಸೂಕ್ಷ÷್ಮವಾಗಿ ಗಮನಿಸಿದಾಗ ಅದು ಬಂಡವಾಳ ಶಾಹಿಗಳ ಕೈ ಸೇರಿದ್ದು, ಅಭಿವೃದ್ಧಿ ಎಂದರೆ ಜನಸಾಮಾನ್ಯರ ಜೀವನಮಟ್ಟ ಸುಧಾರಿಸುವುದು, ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಗಳ ಲಭ್ಯತೆ ಹೆಚ್ಚಿಸುವುದು, ಬಡತನ ನಿರ್ಮೂಲನೆ, ಪರಿಸರ ಸಂರಕ್ಷಣೆ ಮತ್ತು ಭವಿಷ್ಯದ ಪೀಳಿಗೆಯ ಅಗತ್ಯಗಳನ್ನು ಪೂರೈಸಿದಾಗ ನಿಜವಾದ ಅಭಿವೃದ್ಧಿಯಾಗುತ್ತದೆಂದು ತಿಳಿಸಿದರು.

ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಎರಡನ್ನು ಜತೆಯಾಗಿ ತೆಗೆದುಕೊಂಡು ಹೋದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಸಮಾನ ಅವಕಾಶ ಮತ್ತು ಸಾಮಾಜಿಕ ನ್ಯಾಯ ಬೇರೆ ಬೇರೆಯಾಗಿದ್ದು, ಸಮಾನ ಅವಕಾಶದಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಾರೆ. ಆದರೆ ಸಾಮಾಜಿಕ ನ್ಯಾಯದಲ್ಲಿ ಯಾರಿಗೆ ಅದು ಅಗತ್ಯವೋ ಅವರು ಮಾತ್ರ ಪಾಲ್ಗೊಳ್ಳುತ್ತಾರೆ. ಆರ್ಥಿಕ ಅಭಿವೃದ್ಧಿಯನ್ನು ಅಭಿವೃದ್ಧಿ ಎನ್ನುವುದು ತಪ್ಪು. ಅದು ಸವಲತ್ತುಗಳನ್ನು ಮತ್ತು ಆತ್ಮಸ್ಥೆöÊರ್ಯವನ್ನು ಹೆಚ್ಚಿಸುತ್ತದೆ. ನಾವು ಮನುಷ್ಯರನ್ನು ಮನುಷ್ಯರಾಗಿ ನೋಡಿದಾಗ ಸಾಮಾಜಿಕ ನ್ಯಾಯ ದೊರೆಯುತ್ತ ಎಂದು ತಿಳಿಸಿದರು.

ಅಭಿವೃದ್ಧಿ ಎಂದರೆ ಕೇವಲ ಆರ್ಥಿಕ ಬೆಳವಣಿಗೆಯಲ್ಲ, ಅದು ಜನಸಾಮಾನ್ಯರಿಗೆ ತಲುಪುವ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಮಾನವೀಯ ಆಯಾಮಗಳನ್ನು ಒಳಗೊಂಡಿರುವ ಸಮಗ್ರ ಪ್ರಕ್ರಿಯೆಯಾಗಿದೆಂದು ಡಾ.ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತç ವಿವಿಯ ಕುಲಪತಿ ಡಾ.ವಿಶ್ವನಾಥ ಅಭಿಪ್ರಾಯಪಟ್ಟರು.

ಪ್ರಾಧ್ಯಾಪಕರಾದ ಡಾ.ಎಚ್.ಡಿ.ಪ್ರಶಾಂತ್, ಡಾ.ಜನಾರ್ದನ, ಡಾ.ಕೆ.ಮೋಹನ್ ಕೃಷ್ಣ ರೈ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net