ಕಾಯಕ ಯೋಗಿಗಳ ಜಯಂತಿ ಆಚರಣೆ

DC-OFFICE-FUNCTION
Published on

ಹೊಸಪೇಟೆ: ಜಿಲ್ಲಾಡಳಿತದಿಂದ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ನೂಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ನಿಮಿತ್ತ ಗುರುವಾರ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ನೆರವೇರಿಸಲಾಯಿತು.

ಸಂಸದರಾದ ವೈ.ದೇವೇಂದ್ರಪ್ಪ, ಜಿ.ಎಂ.ಸಿದ್ಧೇಶ್ವರ, ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್, ಬಿ.ದೇವೇಂದ್ರಪ್ಪ ಸೇರಿದಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ. ಸಿಇಒ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net