ದೀಪಾವಳಿಗೆ ಹಸಿರು ಪಟಾಕಿ ಬಳಸಿ

16 MANJU 04
Published on

ಹೊಸಪೇಟೆ : ದೀಪಾವಳಿಯನ್ನು ಸಾಂಪ್ರದಾಯಿಕವಾಗಿ ದೀಪಗಳನ್ನು ಬೆಳಗುವ ಮೂಲಕ ಸಂಭ್ರಮದಿAದ ಆಚರಿಸಿ, ವಾಡಿಕೆಯಂತೆ ಪಟಾಕಿ ಹಚ್ಚುವುದಾದರೇ ರಾಸಾಯನಿಕ ಪಟಾಕಿ ಕೈಬಿಡಿ, ಪರಿಸರ ಸ್ನೇಹಿ ಹಸಿರು ಪಟಾಕಿ ಬಳಸಿ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಸೂಚನೆ ನೀಡಿದರು.

ನಿಯಮಾನುಸಾರ ಕಡ್ಡಾಯವಾಗಿ ಪರಿಸರ ಸ್ನೇಹಿ ಪಟಾಕಿಗಳನ್ನು ಬಳಸಬೇಕು. ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿರುತ್ತದೆ. ಹಾಗೂ ಕ್ಯೂಆರ್ ಕೋಡ್ ಸಹಾ ಇರುತ್ತದೆ. ಚಿಹ್ನೆ ಇಲ್ಲದ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ. ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಪ್ರಮುಖವಾಗಿ ಹಸಿರು ಪಟಾಕಿ ತಯಾರಕರಿಗೆ ಹಾಗೂ ಮಾರಾಟಗಾರರಿಗೆ ಮಾತ್ರ ಅನುಮತಿ ನೀಡಲಾಗಿದೆ. ಪಟಾಕಿಗಳನ್ನು ಬಳಸುವಾಗ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದAತೆ ರಾತ್ರಿ 8ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಲಾಗಿದೆ. ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲು ಹಾಗೂ ನಿಷೇಧಿತ ಪ್ರದೇಶದಲ್ಲಿ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ. ಈ ನಿಯಮವನ್ನು ಕಡ್ಡಾಯವಾಗಿ ಸಾರ್ವಜನಿಕರು ಪಾಲಿಸಬೇಕು. ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳು ಹಾಗೂ ಸಂಬAಧಿತ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net