ವೈದ್ಯನ ಪರವಾನಿಗೆ ರದ್ದು ಮಾಡಿ

death
ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ವೈದ್ಯನ ವಿರುದ್ಧ ರಾಜ್ಯ ರೈತ ಸಂಘ ಮತ್ತು ರಾಷ್ಟಿçÃಯ ಗೋರ್ ಸೇನಾ ಪದಾಧಿಕಾರಿ ಗುರುವಾರ ಪ್ರತಿಭಟನೆ ನಡೆಸಿದರು.
Published on

ಹೊಸಪೇಟೆ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ್ಯದಿಂದ ಬಾಲಕ ಮೃತಪಟ್ಟಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ರಾಜ್ಯ ರೈತ ಸಂಘ ಮತ್ತು ರಾಷ್ಟಿçÃಯ ಗೋರ್ ಸೇನಾ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ತಾಳೇಬಸಾಪುರ ತಾಂಡದ ಬಾಲಕನಿಗೆ ಆಸ್ಪತ್ರೆಯ ವೈದ್ಯರು ಸರಿಯಾದ ಚಿಕಿತ್ಸೆ ನೀಡಿಲ್ಲ. ಆರೋಗ್ಯದ ಕುರಿತು ಪಾಲಕರಿಗೂ ಯಾವುದೇ ಮಾಹಿತಿ ನೀಡದೆ ಬಾಲಕನ ಸಾವಿಗೆ ಕಾರಣರಾಗಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಕೂಡಲೇ ಆಸ್ಪತ್ರೆಯ ಪರವಾನಿಗೆ ರದ್ದುಮಾಡಿ, ವೈದ್ಯ ವಿನಯ್ ರಾಘವೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮೃತ ಬಾಲಕನ ತಂದೆ, ತಾಯಿ ಡಿಸಿ ಕಚೇರಿ ಎದುರು ಕಣ್ಣೀರು ಹಾಕುತ್ತಿದ್ದರು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಿ.ಎ.ಗಾಳೆಪ್ಪ, ಚಂದ್ರಶೇಖರ, ಗೋರಸೇನಾ ಕರ್ನಾಟಕ ಸಂಘಟನೆಯ ಕುಮಾರನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net