ಹೊಸಪೇಟೆ: ಈ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ /ತಾಲ್ಲೂಕ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ;8050770004 ಮತ್ತು 805077000 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.