ಹಿರಿಯ ನಾಗರಿಕರ ಆಶಯಗಳಿಗೆ ಗೌರವಿಸಿ

17 MANJU 07
Published on

ಹೊಸಪೇಟೆ: ಹಿರಿಯ ನಾಗರಿಕರಲ್ಲಿ ನವಚೈತನ್ಯ ಮೂಡಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಿ ಅವರ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ. ಎಸ್.ಮನ್ನಿಕೇರಿ ತಿಳಿದರು.

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ತ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು,

ಜಿಲ್ಲೆಯಲ್ಲಿ ಅ.9 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲಾ ಮಟ್ಟದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸೆ.20ರಂದು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ. ಕ್ರೀಡೆಗಳಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾಯನ, ಏಕಪಾತ್ರಾಭಿನಯ ಕಾರ್ಯಕ್ರಮಗಳಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರಾಮಾಂಜನೇಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net