ನಾಳೆ ವಿದ್ಯುತ್ ಗ್ರಾಹಕರ ಸಂವಾದ ಸಭೆ

Published on

ಹೊಸಪೇಟೆ: ಇಲ್ಲಿನ ಗ್ರಾಮೀಣ ಉಪ ವಿಭಾಗದಲ್ಲಿನ  ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಸೆ.೨೧ರಂದು ಬೆಳಿಗ್ಗೆ ೧೧ಕ್ಕೆ ಏರ್ಪಡಿಸಲಾಗಿದೆ. ತಾಲೂಕಿನ ಗ್ರಾಮೀಣ ವಿದ್ಯುತ್ ಗ್ರಾಹಕರು ಸಭೆಗೆ ಭಾಗವಹಿಸಿ ವಿದ್ಯುತ್ ಸಮಸ್ಯೆ ಇದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಜೆಸ್ಕಾಂ ಹೊಸಪೇಟೆ ಕಾರ್ಯ ಮತ್ತು ಪಾಲಕ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net