ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಸಿ

18 MANJU 04 (1)
Published on

ಹೊಸಪೇಟೆ: ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.

ಗ್ರಾ.ಪಂ.ಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ಕನಿಷ್ಠ ವೇತನ ೩೧ ಸಾವಿರ ರೂ., ನಿಗದಿಗೊಳಿಸಬೇಕು. ನಿವೃತ್ತಿ ಅಥವಾ ಮರಣ ಹೊಂದಿದರೆ ಕನಿಷ್ಠ ೬ ಸಾವಿರ ರೂ. ಪಿಂಚಣಿ ಜಾರಿಗೆ ಬರಬೇಕು. ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು. ನೀರುಗಂಟಿಗಳಿಗೆ ನಿರ್ದಿಷ್ಟವಾದ ಕೆಲಸಗಳನ್ನು ನಿಗದಿಪಡಿಸಬೇಕು. ಕರ ವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕು. ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಗ್ರೇಡ್-೧ ಕಾರ್ಯದರ್ಶಿ ಹುದ್ದೆಗೆ ಶೇ.೧೦೦ರಷ್ಟು, ಗ್ರೇಡ್-೨ ಕಾರ್ಯದರ್ಶಿಗಳಿಗೆ ಶೇ.೫೦ ರಷ್ಟು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಶೇ.೫೦ರಷ್ಟು ಸ್ಥಾನಗಳನ್ನು ಬಡ್ತಿ ನೀಡಬೇಕು. ಗ್ರೇಡ್-೧ ಪಂಚಾಯಿತಿಗಳಿಗೆ ಜನಸಂಖ್ಯೆಗೆ ಆಧರಿಸಿ ಗ್ರಾ.ಪಂ.,ಗಳೀಗೆ ಮೇಲ್ದರ್ಜೆಗೆ ಏರಿಸಬೇಕು. ಪಿಡಿಒ ಹುದ್ದೆಗೆ ಶೇ.೬೦ರಷ್ಟು ಸ್ಥಾನವನ್ನು ಗ್ರೇಡ್-೧ ಕಾರ್ಯದರ್ಶಿಗಳಿಗೆ ನೀಡಬೇಕು. ಐಪಿಡಿ ಸಾಳಪ್ಪ ವರದಿಯಂತೆ ಸ್ವಚ್ಛತಾಗಾರರನ್ನು ನೇಮಿಸಬೇಕು. ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಭರಿಸಬೇಕು. ಇ-ಹಾಜರಾತಿ ಲೋಪದೋಷಗಳನು ಸರಿಪಡಿಸುವವರೆಗೆ ಪೂರ್ಣ ವೇತನ ನೀಡಬೇಕು. ಸ್ವಚ್ಛ ವಾಹಿನಿಯ ಚಾಲಕರಾಗಿ ತರಬೇತಿ ಪಡೆದ ಎಲ್ಲ ಚಾಲಕರಿಗೆ ವಾಹನ ನೀಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net