ಭೂಮಿಯನ್ನು ರಕ್ಷಿಸಿದರೆ ನಾಳೆ ಸುರಕ್ಷಿತ

news
ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ಬುಧವಾರ ಜನ-ವನ ಒಬ್ಬರಿಗೊಂದು ಮರ ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲಾನ್ ನ್ಯಾಯಾಧೀಶ ಅಬ್ದುಲ್ ರಹೀಮಾನ ಎ.ನಂದಗಡಿ ಅವರಿಗೆ ಸಸಿ ನೀಡಿದರು.
Published on

ಹೊಸಪೇಟೆ: ಯಾವುದೇ ದೇಶದ ಅಭಿವೃದ್ಧಿಗೆ ಆ ದೇಶದ ಆರ್ಥಿಕ ಸಂಪನ್ಮೂಲಗಳ ಜತೆಗೆ ಪರಿಸರವು ಸಹ ತಳಪಾಯವಾಗಿರುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ ಎ.ನಂದಗಡಿ ಹೇಳಿದರು.

ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಬುಧವಾರ ಜನ-ವನ ಒಬ್ಬರಿಗೊಂದು ಮರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ಭವಿಷ್ಯದ ಬಗ್ಗೆ ಯೋಚಿಸಿ ನಾವೆಲ್ಲರು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು. ಪ್ರಾಣಿ ಮತ್ತು ಪಕ್ಷಿಗಳ ಸಹ ಪರಿಸರದ ಭಾಗವಾಗಿದ್ದು ಹಣ್ಣು ಹಂಪಲದ ಸಸಿ ನೆಡಲು ಹೆಚ್ಚಿನ ಒತ್ತು ಕೊಡಬೇಕು ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲಾನ್ ಮಾತನಾಡಿ, ಬರಗಾಲವನ್ನು ತಡೆಯುವ ಶಕ್ತಿ ಗಿಡಮರಗಳಿಗಿದೆ. ಮರಗಳನ್ನು ಕಡಿಯುವುದರಿಂದ, ಕಾಡಿಗೆ ಬೆಂಕಿ ಹಚ್ಚುವುದರಿಂದ ಹಾಗೂ ಇನ್ನೂ ಬೇರೆ ಬೇರೆ ಕಾರಣಾಂತರಗಳಿAದ ಪರಿಸರ ನಾಶವಾಗುತ್ತಿದೆ. ಆದ್ದರಿಂದ ಗಿಡಮರಗಳನ್ನು ನಾಶಮಾಡುವುದನ್ನು ತಡೆಯಬೇಕು. ಅತೀ ಹೆಚ್ಚಿನ ಪ್ರಮಾಣದಲ್ಲಿ ನಾವು ಗಿಡಮರಗಳನ್ನು ಬೆಳೆಸಿ, ಅರಣ್ಯ ಸಂಪತ್ತನ್ನು ಉಳಿಸಬೇಕು ಎಂದರು.

ನ್ಯಾಯಾಧೀಶರಾದ ಹೇಮಲತಾ ಬಿ.ಹುಲ್ಲೂರು, ಪ್ರಶಾಂತ್ ನಾಗಲಾಪುರ, ಅಶೋಕ.ಎಚ್.ಆರ್, ಸಂಜೀವಕುಮಾರ್.ಜಿ, ಚೈತ್ರ.ಜೆ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಚಿದಾನಂದ, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ರಾಜೇಶ ನಾಯಕ, ಡಿಎಫ್‌ಒ ಎಂ.ಎ.ಭರತ್‌ರಾಜ್, ಜಿಲ್ಲಾ ಆಯುಷ್ ಅಧಿಕಾರಿ ಸುಜಾತ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ಕಾರ್ಯದರ್ಶಿ ಪಿ.ಶ್ರೀನಿವಾಸಮೂರ್ತಿ, ಎನ್.ಎಂ.ಸೌದಗರ್ ಇತರರಿದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net