ಪರಿಸರ ಮಲೀನವಾಗದಂತೆ ಎಚ್ಚರಿಕೆ ವಹಿಸಿ

news
ವಿಜಯನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಡಾ.ಎಂ.ಎಸ್.ದಿವಾಕರ ಸಸಿಗೆ ನೀರು ಹಾಕಿದರು.
Published on

ಹೊಸಪೇಟೆ: ದಿನೇದಿನೆ ಪರಿಸರದ ಸಮತೋಲನ ಕಳೆದುಕೊಳ್ಳುತ್ತಿದ್ದು, ಪ್ರತಿಯೊಬ್ಬರು ಗಂಭೀರವಾಗಿ ಯೋಚಿಸಿ, ಗಿಡಮರಗಳ ಬೆಳೆಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

ಪರಿಸರ ದಿನಾಚರಣೆ ನಿಮಿತ್ತ ವಿಜಯನಗರ ಜಿಲ್ಲಾ ಪ್ರಾದೇಶಿಕ ಅರಣ್ಯ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಭೂಮಿ, ನೀರು, ಗಾಳಿ ಸರಿಯಾಗಿದ್ದಾಗ ಮಾತ್ರ ನಾವು ಆರೋಗ್ಯದಿಂದ ಬದುಕಲು ಸಾಧ್ಯ. ನಮಗಿರುವುದೊಂದೇ ಭೂಮಿ ಎನ್ನುವ ವಾಸ್ತವವನ್ನು ಅರಿಯಬೇಕು. ನೀರು, ಗಾಳಿ ಮಲೀನವಾಗದಂತೆ ಎಚ್ಚರಿಕೆ ವಹಿಸಬೇಕು. ನೀರನ್ನು ಮಿತವಾಗಿ ಬಳಸಬೇಕು ಎಂದು ಸಲಹೆ ಮಾಡಿದರು.

ಜಿ.ಪಂ. ಸಿಇಒ ಸದಾಶಿವ ಬಿ.ಪ್ರಭು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲಾನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net