

ಹೊಸಪೇಟೆ: ವಿಶ್ವ ಪರಿಸರ ದಿನ ನಿಮಿತ್ತ ಪ್ರವಾಸೋದ್ಯಮ ಇಲಾಖೆಯ ಸ್ವಚ್ಛತಾ ಗ್ರೀನ್ ಲೀಫ್ ಅಡಿಯಲ್ಲಿ ತಾಲೂಕಿನ ಕಮಲಾಪುರದ ಹೋಟೆಲ್ ಮಯೂರ ಭುವನೇಶ್ವರಿ ಆವರಣದಲ್ಲಿ ಬುಧವಾರ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ವಿಜಯನಗರ ಜಿ.ಪಂ. ಸಿಇಒ ಸದಾಶಿವ ಬಿ.ಪ್ರಭು ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅಮೋಘವಾದ ಪರಿಸರ ಹೊಂದಿದ ಕಾರಣಕ್ಕೆ ಹಂಪಿಯು ಪ್ರತಿಯೊಬ್ಬರನ್ನು ತನ್ನತ್ತ ಸೆಳೆಯುತ್ತಲೇ ಇದೆ. ಮನುಷ್ಯ ಸೇರಿದಂತೆ ಪ್ರತಿಯೊಂದು ಪ್ರಾಣಿ ಪಕ್ಷಿಗಳ ಸಂರಕ್ಷಣೆಯ ಹಿನ್ನೆಲೆಯಲ್ಲಿ ಈ ಭೂಮಿಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಕೆಎಸ್‌ಟಿಡಿಸಿಯ ವ್ಯವಸ್ಥಾಪಕ ಎಸ್.ಸುನಿಲ್‌ಕುಮಾರ್, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಬಿ.ಡಿ.ಸಾಗರ್, ಪ್ರವಾಸೋದ್ಯಮ ಇಲಾಖೆಯ ಶ್ರೀಹರಿ ಇತರರಿದ್ದರು.