

ಹೊಸಪೇಟೆ: ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ಕರ್ತವ್ಯವಾಗಿದ್ದು, ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚು ಗಿಡಗಳನ್ನು ನೆಟ್ಟು, ಅವುಗಳನ್ನು ಬೆಳೆಸುವ ಮೂಲಕ, ಪರಿಸರ ಸಂರಕ್ಷಣೆಯಲ್ಲಿ ಭಾಗವಹಿಸಬೇಕು ಎಂದು ಕನ್ನಡ ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಕರೆ ನೀಡಿದರು.
ವಿಶ್ವ ಪರಿಸರ ದಿನದ ನಿಮಿತ್ತ ಕನ್ನಡ ವಿವಿಯ ಸಂಗೀತ ಮತ್ತು ನೃತ್ಯ ವಿಭಾಗದ ಆವರಣದಲ್ಲಿ ಬುಧವಾರ ನಡೆದ ಹಸಿರು ಉತ್ಸವ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು.
ಭೂಮಿ ಮರುಸ್ಥಾಪನೆ, ಮರುಭೂಮಿಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಧ್ಯೇಯದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಹಸಿರು ಉತ್ಸವ ಮೂಲಕ ವಿಶಿಷ್ಟವಾಗಿ ವಿಶ್ವ ಪರಿಸರ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಬೆಳೆದು ನಿಂತಿರುವ ಮರಗಿಡಗಳನ್ನು ಕಡಿಯದಂತೆ ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೂ ಇದೆ. ಮಳೆಗಾಲಕ್ಕೂ ಮುನ್ನವೇ ಪ್ಲಾಸ್ಟಿಕ್ ವಸ್ತುಗಳು ಹಾಗೂ ಗಾಜಿನ ಬಾಟಲ್‌ಗಳನ್ನು ವಿಲೇವಾರಿ ಮಾಡುವ ಮೂಲಕ ಪರಿಸರದ ಮಾಲಿನ್ಯವಾಗದಂತೆ ಕಾಪಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದರು.
ವಿವಿಯ ಕುಲಸಚಿವ ಡಾ.ವಿಜಯ್ ಪೂಣಚ್ಚ ತಂಬAಡ, ತೋಟಗಾರಿಕೆ ವಿಭಾಗದ ಸಹಾಯಕ ತೋಟಗಾರಿಕೆ ಅಧಿಕಾರಿ ಬೀರಪ್ಪ ಇತರರಿದ್ದರು.