ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಅಚ್ಚುಕಟ್ಟಾಗಿ ನಡೆಯಲಿ

Published on

ಹೊಸಪೇಟೆ: ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಜೂನ್ 14 ರಿಂದ ಜೂನ್ 22ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ 2 ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಗಸೂಚಿಯನುಸಾರ ಪರೀಕ್ಷೆ ನಡೆಯಬೇಕು. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಪಾಲನೆಗೆ ಸೂಕ್ತ ವ್ಯವಸ್ಥೆಯಾಗಬೇಕು. ಬೇರೆ ಬೇರೆ ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡ ವಿವಿಧ ಹಂತದ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ಅರಿತು ಜವಾಬ್ದಾರಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಡಿಡಿಪಿಐ ಯುವರಾಜ ನಾಯ್ಕ ಮಾತನಾಡಿ, ಹೊಸಪೇಟೆ ತಾಲೂಕಿನಲ್ಲಿ 8, ಹರಪನಹಳ್ಳಿ ತಾಲೂಕಿನಲ್ಲಿ 5, ಕೂಡ್ಲಿಗಿ ತಾಲೂಕಿನಲ್ಲಿ 4, ಹಡಗಲಿ ತಾಲೂಕಿನಲ್ಲಿ 3, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 2 ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ 6,973 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊAಡಿದ್ದಾರೆ. ಈ ಪರೀಕ್ಷೆಗೆ ಕೇಂದ್ರ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಗುರುಗಳನ್ನು ಮಂಡಳಿಯಿAದ ನೇಮಕ ಮಾಡಲಾಗಿದೆ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಪ್ರೌಢಶಾಲಾ ಸಹ ಶಿಕ್ಷಕರನ್ನು ನೇಮಕ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ನಿಯೋಜಿಸಲಾಗಿದೆ. ಮಾರ್ಗಾಧಿಕಾರಿಗಳ ನೇಮಕ ಮಾಡಲಾಗಿದೆ. ಪ್ರತಿ ಕೇಂದ್ರಕ್ಕೆ ಸ್ಥಾನಿಕ ಜಾಗೃತ ದಳವನ್ನು ನೇಮಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net